ಮೈಸೂರು

ಹಾವು ಕಚ್ಚಿ ರೈತ ಸಾವು

ಮೈಸೂರು,ಜ.29:- ಜಮೀನಿಗೆ ನೀರು ಹಾಯಿಸುತ್ತಿದ್ದ ಸಂದರ್ಭದಲ್ಲಿ ರೈತರೋರ್ವರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಪರಿಯಾಪಟ್ಟಣ ತಾಲೂಕಿನ ಚನ್ನೇನಹಳ್ಳಿ ಕೊಪ್ಪಲು (ಚಿಕ್ಕಮಾಗಳಿ) ಗ್ರಾಮದ ನಿವಾಸಿ, ಮೂಲತಃ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕುಂತೂರು ಮೋಳೆಯ ರವಿ(33) ಎಂದು ಗುರುತಿಸಲಾಗಿದೆ. ಇವರು ನಿನ್ನೆ ಬೆಳಿಗ್ಗೆ  ಸುಮಾರು 7 ಗಂಟೆಯ ಸಮಯದಲ್ಲಿ ತನ್ನ ಜಮೀನಿನಲ್ಲಿ ಬೆಳೆದಿದ್ದ ಸೊಪ್ಪು ಹಾಗೂ ತರಕಾರಿ ಬೆಳೆಗೆ ನೀರು ಹಾಯಿಸುತ್ತಿದ್ದಾಗ ಕಾಲಿಗೆ ನಾಗರಹಾವು ಕಚ್ಚಿದೆ, ಈ ಸಂದರ್ಭದಲ್ಲಿ ರವಿ ನೋವನ್ನು ತಡೆಯಲಾರದೆ ಕಿರುಚಿಕೊಂಡಾಗ ತಕ್ಷಣ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಮತ್ತು ಆತನ ಸಂಬಂಧಿಕರು ಸ್ಥಳಕ್ಕಾಗಮಿಸಿ ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಅವರನ್ನು ಕರೆತಂದಿದ್ದಾರೆ. ಈ ಸಂದರ್ಭದಲ್ಲಿ ರವಿಯನ್ನು ಪರೀಕ್ಷಿಸಿದ ವೈದ್ಯರು ರವಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಬಳಿಕ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಶವ ಪರೀಕ್ಷೆ ಮಾಡಿಸಲಾಗಿದ್ದು, ಶವವನ್ನು ಮೃತರ ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: