ಕರ್ನಾಟಕಮೈಸೂರು

ಸಿಎಂ ಭೇಟಿ ಮಾಡಿದ ವಕೀಲರು: ಎಸ್ ಐ ಅಮಾನತಿಗೆ ಆದೇಶಿಸಿದ ಸಿಎಂ

ರಾಜ್ಯ(ಬೆಂಗಳೂರು)ಜ.30:-  ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ, ಹೆಚ್ಚುವರಿ ಅಡ್ವೊಕೇಟ್ ಜನರಲ್ ಪೊನ್ನಣ್ಣ, ಪ್ರಧಾನ ಕಾರ್ಯದರ್ಶಿ ಗಂಗಾಧರಯ್ಯ ಹಾಗೂ ಖಜಾಂಚಿ ಶಿವಮೂರ್ತಿಗಳ ವಕೀಲರ ನಿಯೋಗ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿದೆ.

ಮೈಸೂರಿನಲ್ಲಿ ನಜರ್ ಬಾದ್ ಠಾಣೆಗೆ ದೂರು ನೀಡಲು ತೆರಳಿದ ವಕೀಲ ಗೋಕುಲ್ ಗೋವರ್ಧನ್ ಮೇಲೆ ಪೊಲೀಸ್ ಸಬ್ ಇನ್ಸಪೆಕ್ಟರ್ ನಡೆಸಿದ ಹಲ್ಲೆಗೆ ಸಂಬಂಧಿಸಿದಂತೆ, ಅವರ ಮೇಲೆ ಕ್ರಮ ಕೈಗೊಳ್ಳುವಂತೆ  ವಿನಂತಿಸಿಕೊಂಡರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸಬ್ ಇನ್ಸಪೆಕ್ಟರ್ ಅವರನ್ನು ಅಮಾನತುಗೊಳಿಸುವಂತೆ ಮೌಖಿಕ ಆದೇಶ ನೀಡಿದ್ದಾರೆ. ಅಲ್ಲದೇ ವಕೀಲರ ಇನ್ನಿತರೆ ಸಮಸ್ಯೆಗಳಿಗೂ ಶೀಘ್ರ ಪರಿಹಾರ ದೊರಕಿಸಿಕೊಡುವ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: