ಕರ್ನಾಟಕಪ್ರಮುಖ ಸುದ್ದಿ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ: ರೈತರ ಬಂಧನಕ್ಕೆ ವಿಪಕ್ಷಗಳ ಆಕ್ರೋಶ

ಬೆಳಗಾವಿ: ಕರ್ನಾಟಕ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಆರಂಭವಾಗಿದೆ.

ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ತೆಗೆದುಕೊಂಡ ಕ್ರಮವನ್ನು ಖಂಡಿಸಿ ಸದನ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದವು.

ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿ, ರೈತರನ್ನು ಈಗಾಗಲೇ ಬಿಡುಗಡೆ ಮಾಡಲು ಸೂಚಿಸಿದ್ದೇನೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು ಅಷ್ಟೆ ಎಂದು ಭರವಸೆ ನೀಡಿದ್ದರಿಂದ ಬಿಜೆಪಿ ಸದಸ್ಯರು ಧರಣಿ ಕೈಬಿಟ್ಟರು.

ಶಾಂತಕುಮಾರ್ ಬಂಧನ :

ಟನ್ ಕಬ್ಬುಗೆ 3 ಸಾವಿರ ರು. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರ ಜೊತೆ ಪ್ರತಿಭಟನೆ ನಡೆಸುವ ವೇಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ರಾಜ್ಯ ರೈತ ಸಂಘದ ಮುಖಂಡ ಶಾಂತಕುಮಾರ್ ಮತ್ತು ರೈತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.

Leave a Reply

comments

Related Articles

error: