ಪ್ರಮುಖ ಸುದ್ದಿಮೈಸೂರು

ವಿಷ್ಣು ಸ್ಮಾರಕ ಜಮೀನು ವಿವಾದ : ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್

ಮೈಸೂರು,ಜ.30:- ಮೈಸೂರಿನಲ್ಲೇ ವಿಷ್ಣು ಸ್ಮಾರಕ ಕುರಿತಂತೆ ಭಾರತಿ ವಿಷ್ಣುವರ್ಧನ್ ಜಿಲ್ಲಾಧಿಕಾರಿ ಡಿ.ರಂದೀಪ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮಂಗಳವಾರ ಭಾರತಿ ವಿಷ್ಣುವರ್ಧನ್  ಜಿಲ್ಲಾಧಿಕಾರಿ ಡಿ.ರಂದೀಪ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜಮೀನು ವಿವಾದ ಕೋರ್ಟ್ ಮೆಟ್ಟಿಲೇರಿದೆ.ಇಂಜಕ್ಷನ್ ತೆರವುಗೊಳಿಸುವಂತೆ ರೈತರಿಗೆ ಮನವಿ ಮಾಡಿದ್ದೇನೆ.ರೈತರು ಸ್ಪಂದಿಸುವ ಭರವಸೆ ಇದೆ. ರೈತರೊಂದಿಗೆ ಈವತ್ತು ಚರ್ಚಿಸಿ  ಮನವಿ ಮಾಡುತ್ತೇನೆ. ಈ ವಿಚಾರವಾಗಿ ಜಿಲ್ಲಾಧಿಕಾರಗಳೊಂದಿಗೂ ಚರ್ಚಿಸಿದ್ದೇನೆ. ಮೈಸೂರಿನಲ್ಲೇ ವಿಷ್ಣು ಸ್ಮಾರಕ ನಿರ್ಮಿಸಲು ನಿರ್ಧರಿಸಿದ್ದೇವೆ. ಸ್ಥಳ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: