ಮೈಸೂರು

ಮಹಾಪೌರರಾದ ಭಾಗ್ಯವತಿ ಸುಬ್ರಮಣ್ಯಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರು,ಜ.31-ಕಾಂಗ್ರೆಸ್ ಪಕ್ಷ ತ್ಯಜಿಸಿ ಜೆಡಿಎಸ್-ಬಿಜೆಪಿಯೊಂದಿಗೆ ಮೈತ್ರಿಮಾಡಿಕೊಂಡು ಮಹಾಪೌರರಾಗಿ ಆಯ್ಕೆಯಾಗಿರುವ ಭಾಗ್ಯವತಿ ಸುಬ್ರಮಣ್ಯಂ ಅವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಮೈಸೂರು ನಗರಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ನಿಂದ ಅಧಿಕೃತ ಅಭ್ಯರ್ಥಿಯಾಗಿ ವಾರ್ಡ್ ನಂ.23ರ ನಗರಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿರುವ ಭಾಗ್ಯವತಿ ಸುಬ್ರಮಣ್ಯಂ ಜೆಡಿಎಸ್-ಬಿಜೆಪಿಯೊಂದಿಗೆ ಮೈತ್ರಿಮಾಡಿಕೊಂಡು ಮಹಾಪೌರರಾಗಿ ಕಾಂಗ್ರೆಸ್ ಪಕ್ಷಕ್ಕೆ ದ್ರೋಹವೆಸಗಿದ್ದಾರೆ. ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ದ್ರೋಹವೆಸಗಿರುವ ಇವರು ಮುಂದಿನ ದಿನಗಳಲ್ಲಿ ತಮ್ಮ ಸ್ವಾರ್ಥಕ್ಕಾಗಿ ಮಹಾನಗರಪಾಲಿಕೆಯನ್ನೇ ಮಾರಲು ಹೊರಟರೂ ಆಶ್ಚರ್ಯವಿಲ್ಲ. ಹೀಗಾಗಿ ಭಾಗ್ಯವತಿ ಸುಬ್ರಮಣ್ಯಂ ಅವರು ಒಂದುವಾರದೊಳಗೆ ಮಹಾಪೌರ ಹಾಗೂ ನಗರಪಾಲಿಕೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಸೈಯದ್ ಅಬ್ಬಾಸ್, ಎನ್ ಎಸ್ ಯುಐ ಅಧ್ಯಕ್ಷ ರಫೀಕ್ ಅಲಿ, ರಿಜ್ವಾನ್ ಪಾಷಾ, ಸೈಯದ್ ಆರೀಫ್, ರಾಘವೇಂದ್ರ, ವಿವೇಕ್ ಇತರರು ಭಾಗವಹಿಸಿದ್ದರು. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: