ಮೈಸೂರು

500-1000ರೂ. ಮುಖಬೆಲೆಯ ನೋಟಿನ ಚಲಾವಣೆಗೆ ಸಮಯ ವಿಸ್ತರಿಸಿ : ಪ್ರತಿಭಟನೆ

500, 1000ರೂ. ನೋಟು ಚಲಾವಣೆಗೆ ಸಮಯ ವಿಸ್ತರಿಸಲು ಆಗ್ರಹಿಸಿ, ಕಪ್ಪು ಹಣ ಹೊಂದಿರುವವರ ಮೇಲೆ ಕ್ರಮಕ್ಕೆ ಒತ್ತಾಯಿಸಿ ಮೈಸೂರಿನಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ಸೋಮವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು 500, 1000ರೂ.ಮುಖಬೆಲೆಯ ನೋಟಿನ ನಿಷೇಧದಿಂದ ಜನಸಾಮಾನ್ಯರು ಅದರಲ್ಲೂ ಶ್ರಮಜೀವಿಗಳು ತೊಂದರೆ ಅನುಭವಿಸುವಂತಾಗಿದೆ. ಒಂದೇ ಒಂದು ಕಪ್ಪು ಹಣದ ಪ್ರಕರಣವೂ ಈ ಸರ್ಕಾರದಿಂದ ಬಯಲಾಗಿಲ್ಲ. ಬದಲಾಗಿ ಜನಸಾಮಾನ್ಯರ ದೈನಂದಿನ ಬದುಕನ್ನೂ, ಅವರ ದುಡಿಮೆಯನ್ನೂ, ಮಾನಸಿಕ ನೆಮ್ಮದಿಯನ್ನೂ ಕಸಿದುಕೊಂಡಿದೆ ಎಂದು ಆರೋಪಿಸಿದರು.

ದುಡಿಯುವ ಜನರ ಬದುಕಿನ ಮೇಲೆ ದುಷ್ಪರಿಣಾಮ ಬೀರುವ 500 ಮತ್ತು 1000ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಬೇಕು ಎಂದು ಆಗ್ರಹಿಸಿದರು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ, ಸಹಕಾರಿ ಬ್ಯಾಂಕ್ ಗಳಲ್ಲಿಯೂ ಈ ಹಣಕಾಸು ವಹಿವಾಟಿಗೆ ಅವಕಾಶ ಕಲ್ಪಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ಜಿ.ಜಯರಾಂ ಸೇರಿದಂತೆ ಹಲವಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Leave a Reply

comments

Related Articles

error: