ಮೈಸೂರು

ಶೋಷಿತ ಸಮುದಾಯ ಬೆಳವಣಿಗೆಗೆ ಶಿಕ್ಷಣ ಮುಖ್ಯ: ಹೆಚ್.ಎ.ವೆಂಕಟೇಶ್

ಮೈಸೂರು ಫೆ.1  :- ಶೋಷಿತ ಸಮುದಾಯದವರ ಬೆಳವಣಿಗೆಗೆ ಶಿಕ್ಷಣ ಬಹುಮುಖ್ಯವಾಗಿದ್ದು, ಶೋಷಿತರು ಶಿಕ್ಷಣದಿಂದ ಸಮಾಜ ಸಂಘಟನೆಯಲ್ಲಿ ತೊಡಗಿಸಿಕೊಂಡು ಉತ್ತಮ ಸಮಾಜ ಸೃಷ್ಟಿಸಲು ಹಾಗೂ ಮುಖ್ಯವಾಹಿನಿಗೆ ಬರಲು ನೆರವಾಗುತ್ತದೆ ಎಂದು ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಹೆಚ್.ಎ.ವೆಂಕಟೇಶ್ ತಿಳಿಸಿದರು.
ನಗರದ ಜಗನ್ಮೋಹನ ಅರಮನೆಯಲ್ಲಿ ಜಿಲ್ಲಾಡಳಿತ, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಸಮಿತಿ ವತಿಯಿಂದ ಗುರುವಾರ ನಡೆದ ಮಾಚಿದೇವರ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು ಮಡಿವಾಳ ಮಾಚಿದೇವರು 12ನೇ ಶತಮಾನದಲ್ಲಿಯೇಶಿಕ್ಷಣಕ್ಕೆ ಆದ್ಯತೆ ನೀಡಿದ್ದರು ಎಂದರು.
ಪ್ರಜಾಪ್ರಭುತ್ವ  ವ್ಯವಸ್ಥೆಯಲ್ಲಿ ಸಂಘಟನೆಯು ಬಹಳ ಮುಖ್ಯವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂತಹ ಜಯಂತಿಗಳನ್ನು ಆಚರಿಸುವ ಮೂಲಕ ಸಮಾಜ ಕಟ್ಟುವ ಕಾರ್ಯದಲ್ಲಿ ಮುಂದಾಗಿದ್ದಾರೆ ಎಂದು ತಿಳಿಸಿದರು.
ಸಮಾಜದಲ್ಲಿ ಯಾವುದೇ ಕೆಲಸ ದೊಡ್ಡದಲ್ಲ, ಚಿಕ್ಕದಲ್ಲ ಎಂಬ ಸಂದೇಶವನ್ನು ಜಗತ್ತಿಗೆ ಸಾರಿದವರು ಮಡಿವಾಳ ಮಾಚಿದೇವರು. ಇಂದು ನಾವು ಅವರ ಸಂದೇಶವನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು. ಮಾಚಿದೇವರು ಶ್ರಮಜೀವಿಯಾಗಿ ಸಮಾಜದ ಒಳಿತಿಗಾಗಿ ಶ್ರಮಿಸಿದವರು. ಶಿವನ ಭಕ್ತನಾಗಿ ಶಿವಶರಣರ ಸೇವಕನಾಗಿ ಕಾಯಕ ಮಾಡಿದ ಮಹಾಪುರುಷ ಎಂದು ತಿಳಿಸಿದರು.
ಶಾಸಕ ಸೋಮಶೇಖರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಕನ್ನಡ ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್.ಚೆನ್ನಪ್ಪ, ಟಿ.ನರಸೀಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ರಾಜು, ಪಾಲಿಕೆ ಸದಸ್ಯ ಸುನೀಲ್, ಮಡಿವಾಳ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹಾಗೂ ಮಡಿವಾಳ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.   ಕಾರ್ಯಕ್ರಮಕ್ಕೂ ಮುನ್ನ ಆಕರ್ಷಕ ಮೆರವಣಿಗೆ ನಡೆಯಿತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: