ಕರ್ನಾಟಕಪ್ರಮುಖ ಸುದ್ದಿ

ಕರ್ನಾಟಕ ಹೈಕೋರ್ಟ್ ಸಿಜೆ ಹುದ್ದೆಗೆ ದಿನೇಶ್ ಮಹೇಶ್ವರಿ ಹೆಸರು ಶಿಫಾರಸು

ಬೆಂಗಳೂರು,ಫೆ.2-ಕರ್ನಾಟಕ ಹೈ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಿನೇಶ್ ಮಹೇಶ್ವರಿ ಅವರನ್ನು ನೇಮಕ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ 5 ಸದಸ್ಯರ ಕೊಲಿಜಿಯಂ ಜ.10ರಂದು  ದಿನೇಶ್ ಮಹೇಶ್ವರಿ ಅವರನ್ನು ನೇಮಕ ಮಾಡಲು ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ರಾಜಸ್ಥಾನ ಮೂಲದ ದಿನೇಶ್ ಮಹೇಶ್ವರಿ 2016ರ ಫೆಬ್ರವರಿ 24ರಿಂದ ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017ರ ಅಕ್ಟೋಬರ್ ನಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ನಿವೃತ್ತರಾಗಿದ್ದರು. ನಂತರ ಎಚ್.ಜಿ.ರಮೇಶ್ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು.

ದಿನೇಶ್ ಮಹೇಶ್ವರಿ ಸೇವಾ ಹಿರಿತನದಲ್ಲಿ ಎಚ್.ಜಿ.ರಮೇಶ್ ಅವರಿಗಿಂತ ಕಿರಿಯರು. ಆದರೆ ಹಿಂದೆ ಎಚ್.ಜಿ.ರಮೇಶ್ ಮುಖ್ಯ ನ್ಯಾಯಮೂರ್ತಿ ಸ್ಥಾನವನ್ನು ನಿರಾಕರಿಸಿದ್ದರು. ಆದ್ದರಿಂದ, ದಿನೇಶ್ ಮಹೇಶ್ವರಿ ಅವರ ಹೆಸರು ಶಿಫಾರಸು ಮಾಡಲಾಗಿದೆ. (ವರದಿ-ಎಂ.ಎನ್)

Leave a Reply

comments

Related Articles

error: