ಸುದ್ದಿ ಸಂಕ್ಷಿಪ್ತ

ಕಾಲೇಜು ಪ್ರಾರಂಭಿಸಲು ಅರ್ಜಿ ಆಹ್ವಾನ

ಮೈಸೂರು, ಫೆ.3:- 2018-19ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯಲ್ಲಿ ಖಾಸಗಿ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಚಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ/ ಟ್ರಸ್ಟ್‍ಗಳಿಂದ ಪದವಿಪೂರ್ವ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ.
ಇಲಾಖೆಯ ವೆಬ್‍ಸೈಟ್ www.pue.kar.nic.in ನಲ್ಲಿ ಆನ್‍ಲೈನ್ ಮೂಲಕ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 05 ರ ವರೆಗೆ ವಿಸ್ತರಿಸಲಾಗಿದೆ .
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ, ದೂರವಾಣಿ ಸಂಖ್ಯೆ: 0821-2440371 ಅಥವಾ ಸುನೀಲ್‍ಕುಮಾರ್.ಕೆ.ಎಸ್.-ವಿಷಯನಿರ್ವಾಹಕರು ದೂರವಾಣಿ ಸಂಖ್ಯೆ:9480577677 ನ್ನು ಸಂಪರ್ಕಿಸಬಹುದು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: