ಕರ್ನಾಟಕ

ಅಣ್ಣ-ಅತ್ತಿಗೆಯ ಹತ್ಯೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ವ್ಯಕ್ತಿ ಸಾವು

ಮಡಿಕೇರಿ,ಫೆ.3-ಆಸ್ತಿ ವಿಚಾರವಾಗಿ ಬೆಳಿಗ್ಗೆಯಷ್ಟೇ ಅಣ್ಣ-ಅತ್ತಿಗೆಗೆ ಶೂಟ್ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಪಳಂಗಿಯಂಡ ಉತ್ತಪ್ಪ ತಮ್ಮಯ್ಯ (62) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಿಗ್ಗಾಲು ಗ್ರಾಮದಲ್ಲಿ ಪಳಂಗಿಯಂಡ ತಮ್ಮಯ್ಯ ಎಂಬಾತ ಅಣ್ಣ ದೇವಯ್ಯ (66) ಹಾಗೂ ಅತ್ತಿಗೆ ಪ್ರೇಮ ದೇಚಮ್ಮ (53) ಅವರಿಗೆ ಗುಂಡು ಹಾರಿಸಿ ಹತ್ಯೆಗೈದಿದ್ದ. ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಪಳಂಗಿಯಂಡ ಉತ್ತಪ್ಪ ತಮ್ಮಯ್ಯನನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾನೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ-ಕೆಸಿಐ, ಎಂ.ಎನ್)

Leave a Reply

comments

Related Articles

error: