
ಮೈಸೂರು
ಪಟಾಕಿ ಸಿಡಿಸುವ ಮೂಲಕ ಕಾರ್ತೀಕ ಮಾಸಕ್ಕೆ ತೆರೆ
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿರುವ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಕೊನೆಯ ನಾಲ್ಕನೇ ಕಾರ್ತೀಕ ಸೋಮವಾರವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಶ್ರೀಕಂಠೇಶ್ವರ ದೇವಳದಲ್ಲಿ ಕಾರ್ತೀಕ ಮಾಸದಲ್ಲಿ ಪ್ರತಿ ಸೋಮವಾರವೂ ಜನಜಂಗುಳಿಯೇ ಇರುತ್ತದೆ. ಸಹಸ್ರಾರು ಭಕ್ತಾದಿಗಳು ಶ್ರೀದೇವರ ದರ್ಶನ ಪಡೆದು ಪುನೀತರಾಗುತ್ತಾರೆ. ಕಾರ್ತೀಕ ಮಾಸದಲ್ಲಿ ಸ್ವಾಮಿಯ ದರ್ಶನ ಮಾಡಿದರೆ ಪುಣ್ಯದ ಜೊತೆಗೆ ಸಕಲ ಇಷ್ಟಾರ್ಥಗಳು ಪ್ರಾಪ್ತಿಯಾಗುತ್ತವೆ ಎನ್ನುವುದು ಇಲ್ಲಿಗೆ ಬರುವ ಭಕ್ತರ ನಂಬಿಕೆ.
ನಾಲ್ಕನೇ ಕಾರ್ತೀಕ ಸೋಮವಾರದಂದು ದೇವಳದ ಹೊರಾವರಣದಲ್ಲಿ ಪಟಾಕಿ ಸಿಡಿಸಿ ಭಕ್ತರು ಸಂಭ್ರಮಿಸಿದರು. ಪಟಾಕಿ ಸಿಡಿಸುವ ಮೂಲಕ ಕಾರ್ತೀಕ ಮಾಸಕ್ಕೆ ತೆರೆ ಎಳೆಯಲಾಯಿತು. ಈ ಸಂದರ್ಭ ಸಹಸ್ರಾರು ಭಕ್ತರು ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾದರು.