ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ

ರಾಮನಗರ,ಫೆ.05: ಮದುವೆ ಮನೆಗೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಬಸವನಪುರ ಗೇಟ್ ಬಳಿ ನಡೆದಿದೆ.

ಬೆಂಗಳೂರಿನಿಂದ ಮೈಸೂರಿಗೆ ಮದುವೆಗೆಂದು ಮಿನಿಬಸ್ ನಲ್ಲಿ 25 ಜನರು ಹೊರಟ್ಟಿದ್ದರು. ಈ ವೇಳೆ ಬಸವನಪುರ ಸಮೀಪ ಹಂಪ್ ದಾಟುವ ವೇಳೆ ಮಿನಿಬಸ್ ಚಾಲಕನ ನಿಯಂತ್ರಣ ತಪ್ಪಿದೆ.  ಅಪಘಾತದಲ್ಲಿ ಬಸ್ ನಲ್ಲಿದ್ದವರಿಗೆ  ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಬಂದ ರಾಮನಗರ ಟ್ರಾಫಿಕ್ ಪೊಲೀಸರು ಬಸ್ಸನ್ನು ತೆರವುಗೊಳಿಸಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. (ವರದಿ: ಪಿ. ಎಸ್ )

Leave a Reply

comments

Related Articles

error: