ಮೈಸೂರು

ಸಚಿವ ಸೇಠ್ ರಾಜೀನಾಮೆ ನೀಡಬೇಕು: ನಗರ ಬಿಜೆಪಿ ಆಗ್ರಹ, ಪ್ರತಿಭಟನೆ

ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕುಳಿತು ಮೊಬೈಲಿನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ ಸಚಿವ ತನ್ವೀರ್‍ ಸೇಠ್‍ ಅವರನ್ನು ಕಾಂಗ್ರೆಸ್ ರಕ್ಷಿಸುತ್ತಿದೆ. ಅವರಿಂದ ರಾಜೀನಾಮೆಯನ್ನು ಪಡೆಯಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿಯು ನಗರಾಧ್ಯಕ್ಷ ಡಾ. ಬಿ.ಎಚ್. ಮಂಜುನಾಥ್ ನೇತೃತ್ವದಲ್ಲಿ ಮಂಗಳವಾರದಂದು ಎಫ್‍ಟಿಎಸ್‍ ವೃತ್ತದ ಬಳಿ ಪ್ರತಿಭಟನೆ ನಡೆಸಿತು.

ಸೇಠ್ ಅವರು ಅಶ್ಲೀಲ ಚಿತ್ರ ವೀಕ್ಷಿಸಿರುವ ದೃಶ್ಯಗಳನ್ನು ಮಾಧ್ಯಮಗಳ ಮೂಲಕ ಇಡೀ ರಾಜ್ಯದ ಜನರೇ ನೋಡಿದ್ದಾರೆ. ಹೀಗಿರುವಾಗ ಕಾಂಗ್ರೆಸ್‍ ನಾಯಕರು ಅವರು ಯಾವುದೇ ಅಶ್ಲೀಲ ಚಿತ್ರ ವೀಕ್ಷಿಸಿಲ್ಲ ಎಂದು ವರದಿ ನೀಡಿರುವುದು ಎಷ್ಟರ ಮಟ್ಟಿಗೆ ಸರಿ. ಶಿಕ್ಷಣದಂತಹ ಪ್ರಮುಖ ಖಾತೆಯಲ್ಲಿರುವ ತನ್ವೀರ್‍ ಸೇಠ್ ಅವರು ತೋರಿರುವ ದುರ್ವರ್ತನೆ ವಿದ್ಯಾರ್ಥಿಗಳ ಮೇಲೆ ಯಾವ ರೀತಿ ಕೆಟ್ಟ ಪರಿಣಾಮ ಬೀರಬಹುದು ಎಂಬುದನ್ನು ಕಾಂಗ್ರೆಸ್ ನಾಯಕರು ಯೋಚಿಸುತ್ತಿಲ್ಲ. ಈ ಕೂಡಲೇ ತಪ್ಪನ್ನು ಒಪ್ಪಿಕೊಂಡು ಸಚಿವ ಸೇಠ್ ರಾಜೀನಾಮೆ ನೀಡಬೇಕು. ಅಥವಾ ಮುಖ್ಯಮಂತ್ರಿಗಳು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸರಕಾರದ ವಿರುದ್ಧ ತೀವ್ರವಾದ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಸಿದರು.

Leave a Reply

comments

Related Articles

error: