ಮೈಸೂರು

ಎರಡನೇ ದಿನಕ್ಕೆ ಕಾಲಿಟ್ಟ ಧರಣಿ

pritest-2ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ, ಬರ ನಿರ್ವಹಣೆಗೆ ಒತ್ತಾಯಿಸಿ  ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಜನಶಕ್ತಿ ನಡೆಸುತ್ತಿರುವ ಅನಿರ್ದಿಷ್ಟ ಕಾಲಾವಧಿ ಧರಣಿ ಎರಡನೇ ದಿನಕ್ಕೆ ಕಾಲಿರಿಸಿದೆ.

ಮೈಸುರಿನ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಧರಣಿಯಲ್ಲಿ ರೈತರು ಕೃಷಿಕರ, ಕಾರ್ಮಿಕ ವರ್ಗದ ಹಾಗೂ ಸ್ವಸಹಾಯ ಸಂಘಗಳ ಸಂಪೂರ್ಣ ಸಾಲಮನ್ನಾ ಮಾಡುವಂತೆ ಒತ್ತಾಯಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲೇ ಮಧ್ಯಾಹ್ನದ ಅಡುಗೆ ಮಾಡಲೂ ತಯಾರಿ ನಡೆಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸಕೋಟೆಯ ಬಸವರಾಜು ಮಾತನಾಡಿ ಸರ್ಕಾರ ರೈತರನ್ನು ಕಡೆಗಣಿಸಿದೆ. ನಮ್ಮ ಹೋರಾಟ ನಿರಂತರವಾಗಿದ್ದು, ನಮ್ಮ ಬೇಡಿಕೆ ಈಡೇರುವವರೆಗೂ ನಿರಂತರ ಹೋರಾಟ ನಡೆಸಲಿದ್ದೇವೆ ಎಂದರು.

Leave a Reply

comments

Related Articles

error: