ಮೈಸೂರು

ಶಾಸಕ ಜಿ.ಟಿ.ದೇವೇಗೌಡ ಹುಟ್ಟುಹಬ್ಬ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಅಖಿಲ ಕರ್ನಾಟಕ ಪರಿಸರ ಜಾಗೃತಿ ವೇದಿಕೆಯು ಶಾಸಕ ಜಿ.ಟಿ.ದೇವೇಗೌಡ ಅವರ 68ನೇ ಹುಟ್ಟುಹಬ್ಬದಂಗವಾಗಿ ಪ್ರಬಂಧ ಮಂಡನೆ ಸ್ಪರ್ಧೆಯನ್ನು ಹಮ್ಮಿಕೊಂಡಿದೆ ಎಂದು ಕಾರ್ಯದರ್ಶಿ ಮ.ನ.ಲತಾಮೋಹನ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅವರು ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನ.25ರಂದು ಬೆಳಗ್ಗೆ 10.30ಕ್ಕೆ ಜೀನಿಯಸ್ ಕಾಲೇಜಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ “ಪರಿಸರ ಸಂರಕ್ಷಣೆ” ವಿಷಯವಾಗಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ಕಾರ್ಯಕ್ರಮದಲ್ಲಿ ಶ್ರೀವಂಗೀಪುರಂ ಮಠಾಧಿಪತಿ ಇಳೈ ಅಳ್ವಾರ್ ಸ್ವಾಮೀಜಿ ಸಾನಿಧ್ಯ ವಹಿಸುವರು. ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲೆ ಸುರೇಖ ಪ್ರಭು ಅಧ್ಯಕ್ಷತೆ ವಹಿಸುವರು, ವಿಶೇಷ ಆಹ್ವಾನಿತರಾಗಿ ಮಹಾಪೌರ ಬಿ.ಎಲ್.ಭೈರಪ್ಪ, ಜಿ.ಪಂ.ಅಧ್ಯಕ್ಷೆ ನಹೀಮಾ ಸುಲ್ತಾನ್, ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಎಚ್.ವಿ.ರಾಜೀವ್. ಸಾಮಾಜಿಕ ಚಿಂತಕ ಕೆ.ರಘುರಾಂ, ಗ್ರಾ.ಪಂ.ಅಧ್ಯಕ್ಷೆ ಶಾರದಮ್ಮ ಹಾಗೂ ಇತರರು ಉಪಸ್ಥಿತರಿರುವರು. ಈಗಾಗಲೇ, ಪ್ರೌಢಶಾಲೆಗಳಿಗೆ ಪ್ರಬಂಧ ಸ್ಪರ್ಧೆಯ ಬಗ್ಗೆ ಸುತ್ತೋಲೆಗಳನ್ನು ಕಳುಹಿಸಲಾಗಿದೆ ಎಂದು ತಿಳಿಸಿ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9481831434 ಹಾಗೂ 9590602603 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಇಳೈ ಆಳ್ವಾರ್ ಸ್ವಾಮೀಜಿ ಲೋಕೇಶ್ ಟಿ.ಎಂ ಉಪಸ್ಥಿತರಿದ್ದರು.

Leave a Reply

comments

Related Articles

error: