ಮೈಸೂರು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಕೆಪಿಟಿಸಿಎಲ್ ಗುತ್ತಿಗೆ ಕಾರ್ಮಿಕರಿಂದ ಪ್ರತಿಭಟನೆ, ಪಾದಯಾತ್ರೆ

ಸರ್ಕಾರವು ನಡೆಸುತ್ತಿರುವ ಇಲಾಖೆಯ ನೌಕರರ ವಜಾ ನಿಲ್ಲಿಸಿ. ಹುದ್ದೆಗಳ ನೇಮಕಾತಿಯಲ್ಲಿ ಗುತ್ತಿಗೆ ನೌಕರರಿಗೆ ಆದ್ಯತೆ  ಹಾಗೂ ಸಮಾನ ವೇತನಕ್ಕೆ ಆಗ್ರಹಿಸಿ ಕೆಪಿಟಿಸಿಎಲ್ ವಿದ್ಯುತ್ ವಿತರಣಾ ಗುತ್ತಿಗೆ ಕಾರ್ಮಿಕರ ಸಂಘ ಮತ್ತು ಕರ್ನಾಟಕ ವಿದ್ಯುತ್ ಸರಬರಾಜು ಕಂಪನಿಗಳ ಗುತ್ತಿಗೆ ನೌಕರರ ಸಂಘವು ಪ್ರತಿಭಟನೆ ಹಾಗೂ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾಧ್ಯಕ್ಷ ಎಂ.ಶಶಿಧರ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅವರು, ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ನ.28 ಮತ್ತು 29ರಂದು ಬೆಳಗಾವಿ ಸುರ್ವಣ ಸೌಧದ ಮುಂದೆ ಪ್ರತಿಭಟನೆ ನಡೆಸಲು ಬೆಳಗಾವಿ ಚಲೋ ಹೋರಾಟವನ್ನು ಹಮ್ಮಿಕೊಂಡಿದ್ದೇವೆ. ನ.28ರಂದು ಬೆಳಗಾವಿ ನಗರದಿಂದ ಸುರ್ವಣಸೌಧದವರೆಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಯಾತ್ರೆ ನಡೆಸಲಿದೆ. ರಾಜ್ಯ ವಿವಿಧ ಜಿಲ್ಲೆಗಳ ಇಲಾಖೆಯ ಸಾವಿರಾರು ನೌಕರರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಈಗಾಗಲೇ ಗುತ್ತಿಗೆ ಆಧಾರದ ಮೇಲೆ ಹತ್ತು ಹದಿನೈದು ವರ್ಷಗಳ ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ನೌಕರರನ್ನು ಸರ್ಕಾರವೂ ನಿರ್ದಯವಾಗಿ ಕೈಬಿಡುವ ಯತ್ನ ನಡೆಸಿದ್ದಾರೆ. ಈ ಬಗ್ಗೆ ನೌಕರರು ಕೈಗಾರಿಕಾ ವಿವಾದ ಕಾಯ್ದೆ ಅಡಿ ಖಾಯಂಮಾತಿಗಾಗಿ ಕಾರ್ಮಿಕ ಇಲಾಖೆಯಲ್ಲಿ ವ್ಯಾಜ್ಯ ಹೂಡಿದ್ದು, ನೇಮಕಾತಿ ಅಕ್ರಮವಾಗುವುದು ಎಂದು ತಿಳಿಸಿ ಸುರಕ್ಷಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಅಪಘಾತದಲ್ಲಿ ಮಡಿದ ಕಾರ್ಮಿಕ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಿ ಹೀಗೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಅಧಿವೇಶನದಲ್ಲಿ ಆಗ್ರಹಿಸಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪಿ.ಮಹದೇವ್ ಹಾಗೂ ಯಶೋಧರ ಇದ್ದರು.

Leave a Reply

comments

Related Articles

error: