ಸುದ್ದಿ ಸಂಕ್ಷಿಪ್ತ

ನಾಳೆ ರಾಜ್ಯಮಟ್ಟದ ಸಮಾವೇಶ

ಮೈಸೂರು,ಫೆ.7 : ಮೈವಿವಿಯ ಸಮಾಜಶಾಸ್ತ್ರ ಅಧ್ಯಯನ ವಿಭಾಗ,ಹಿರಿಯ ವಿದ್ಯಾರ್ಥಿಗಳ ಸಂಘದಿಂದ ‘ಜಾಗತೀಕರಣ ಮತ್ತು ಅಭಿವೃದ್ಧಿ ಸಾಮಾಜಿಕ ಆಯಾಮಗಳು : ಪ್ರಕ್ರಿಯೆಗಳು ಹಾಗೂ ಕಾಳಜಿಗಳು ವಿಷಯವಾಗಿ ರಾಜ್ಯಮಟ್ಟದ ಸಮಾವೇಶವನ್ನು ಫೆ.8ರ ಬೆಳಗ್ಗೆ 10.30ಕ್ಕೆ ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಏರ್ಪಡಿಸಿದೆ.

ಕುಲಪತಿ ಪ್ರೊ.ಸಿ.ಬಸವರಾಜು, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರೊ.ಕೆ.ಸುಮಿತ್ರಾಬಾಯಿ ಅಧ್ಯಕ್ಷತೆ, ಭಾರತೀಯ ಸಮಾಜಶಾಸ್ತ್ರ ಸಂಘದ ಅಧ್ಯಕ್ಷೆ ಪ್ರೊ.ಆರ್.ಇಂದಿರಾರಿಂದ ದಿಕ್ಸೂಚಿ ಭಾಷಣ, ಸಂಪನ್ಮೂಲ ವ್ಯಕ್ತಿಗಳಾಗಿ ಗೋವಾ ವಿವಿಯ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಗಣೇಶ ಸೋಮಯಾಜಿ, ಮೈವಿವಿ ವಾಣಿಜ್ಯ ಶಾಸ್ತ್ರ ವಿಭಾಗದ ಪ್ರೊ.ಯಶವಂತ ಡೋಂಗ್ರೆ ಭಾಗಿಯಾಗುವರು. (ಕೆ.ಎಂ.ಆರ್)

Leave a Reply

comments

Related Articles

error: