
ಕರ್ನಾಟಕ
ವಿಜ್ಞಾನ ವಸ್ತು ಪ್ರದರ್ಶನ
ರಾಜ್ಯ(ಮಡಿಕೇರಿ)ಫೆ.8:- ಸೋಮವಾರಪೇಟೆ ಸಮೀಪದ ಹೊಸತೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ ಅಭಿಯಾನದಡಿ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು.
ಗ್ರಾಮ ಪಂಚಾಯಿತಿ ಸದಸ್ಯರಾದ ಗೌತಮ್ ಶಿವಪ್ಪ, ಸುಮಾ ಹಾಗು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದರು. ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವಶಾಸ್ತ್ರ ಹಾಗು ಗಣಿತ ವಿಷಯಕ್ಕೆ ಸಂಬಂಧಿಸಿದ ಪ್ರಯೋಗಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಐಗೂರು ಪ್ರೌಢಶಾಲೆ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ನಾಲ್ಕು ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ರಾಷ್ಟ್ರೀಯ ಆವಿಷ್ಕಾರ ಅಭಿಯಾದ ಕಾರ್ಯಯೋಜನೆಗಳ ಕುರಿತು, ಡಯಾಟ್ನ ಹಿರಿಯ ಉಪನ್ಯಾಸಕರಾದ ಮಲ್ಲೇಸ್ವಾಮಿ ಮತ್ತು ಸಿದ್ದೇಶ್ ಮಾಹಿತಿ ನೀಡಿದರು. ಹೊಸತೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪವಿತ್ರ, ಸಹಶಿಕ್ಷಕರಾದ ರವಿಶಂಕರಪ್ಪ ಉಪಸ್ಥಿತರಿದ್ದರು. (ಕೆಸಿಐ,ಎಸ್.ಎಚ್)