ಮೈಸೂರು

ಅಂತರ್ ಕಾಲೇಜು ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ತೃತೀಯ ಸ್ಥಾನ

19ನೇ ಅಂತರಕಾಲೇಜು ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಮೈಸೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ರಚನಾ ವೈ.ಎಲ್. ತೃತೀಯ ಸ್ಥಾನ ಪಡೆದಿದ್ದಾರೆ. ಕ್ರೀಡಾಕೂಟವು ಕೋಲಾರದ ಡಾ.ಟಿ.ತಿಮ್ಮಯ್ಯ ತಾಂತ್ರಿಕ ವಿದ್ಯಾಲಯದಲ್ಲಿ ನಡೆಯಿತು. ರಚನಾ ಬನ್ನೂರು ರಸ್ತೆಯಲ್ಲಿರುವ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಈಕೆಯ ಸಾಧನೆಗೆ ಪ್ರಾಂಶುಪಾಲರಾದ ಡಾ.ಬಸವರಾಜು, ದೈಹಿಕ ಶಿಕ್ಷಣ ನಿರ್ದೇಶಕ ಮುರಳಿಧರ್, ಕಾಲೇಜಿನ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿಯು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅಭಿನಂದಿಸಿ ಶುಭ ಹಾರೈಸಿದ್ದಾರೆ.

Leave a Reply

comments

Related Articles

error: