ಸುದ್ದಿ ಸಂಕ್ಷಿಪ್ತ

ಶ್ರೀ ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ಮೂಲ ದೇವರಿಗೆ ಚಿನ್ನದ ಕೊಳಗ ಧಾರಣೆ

ಮೈಸೂರು ಫೆ.10:- ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 13ರಂದು ಅರಮನೆ ಕೋಟೆ ಆವರಣದಲ್ಲಿರುವ ಶ್ರೀ ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ಮೂಲ ದೇವರಿಗೆ ಚಿನ್ನದ ಕೊಳಗ (ಚಿನ್ನದ ಮುಖವಾದ ) ವನ್ನು ಧಾರಣೆ ಮಾಡಲಾಗುವುದು.

ಭಕ್ತಾದಿಗಳ ಅನುಕೂಲಕ್ಕಾಗಿ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12  ಗಂಟೆಯ ವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವರಾಹ ದ್ವಾರ, ಪಾರ್ಕಿಂಗ್, ಅಂಬಾ ವಿಲಾಸ ಪಾರ್ಕಿಂಗ್ ಮತ್ತು ಕಾಡಾ ಕಚೇರಿಯ ಕಾಂಪೌಂಡ್‍ನಲ್ಲಿ ಭಕ್ತಾದಿಗಳ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ರಾಮಾನುಜ ರಸ್ತೆಯಲ್ಲಿರುವ ಶ್ರೀ ಕಾಮಕಾಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ ಹಾಗೂ ಪ್ರಸಾದ ವಿನಿಯೋಗ ಮತ್ತು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಅರಮನೆ ಮುಜುರಾಯಿ ದೇವಾಲಯಗಳ ವ್ಯವಸ್ಥಾಪಕರು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: