ಕರ್ನಾಟಕಪ್ರಮುಖ ಸುದ್ದಿ

ಮುಖ್ಯಮಂತ್ರಿ ಭರವಸೆ: ಬಿಸಿಯೂಟ ತಯಾರಿಸುವ ಸಿಬ್ಬಂದಿ ಪ್ರತಿಭಟನೆ ಸ್ಥಗಿತ

ಬೆಂಗಳೂರು (ಫೆ.10): ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿ ಕಳೆದ 5 ದಿನಗಳಿಂದ ರಾಜಧಾನಿಯಲ್ಲಿ ಸತತ ಪ್ರತಿಭಟನೆ ನಡೆಸುತ್ತಿದ್ದ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಕಾರ್ಯಕರ್ತೆಯರು ತಮ್ಮ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ನಡೆದ ಸಂಧಾನ ಸಭೆಯಲ್ಲಿ ತಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ದೊರೆತ ಕಾರಣ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ರಾಜಧಾನಿ ಬೆಂಗಳೂರಿನ ಫ್ರೀಡಮ್‍ಪಾರ್ಕ್‍ನಲ್ಲಿ ಕಳೆದ 4 ದಿನಗಳಿಂದ ಅಹೋರಾತ್ರಿ ಚಳಿ, ಗಾಳಿ ನಡುವೆಯೂ ಬಿಸಿಯೂಟ ತಯಾರಿಸುವ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನಾಕಾರರ ಪೈಕಿ ನಿನ್ನೆ ಮೂವರು ಮಹಿಳೆಯರು ಅಸ್ವಸ್ಥಗೊಂಡು ಆಸ್ಪತ್ರಗೆ ಸೇರಿಸಲಾಗಿತ್ತು.  ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಬಜೆಟ್‍ನಲ್ಲಿ ಬೇಡಿಕೆಗಳನ್ನು ಈಡೇರಿಸುವ ಖಚಿತ ಭರವಸೆ ನೀಡಿದ ಕಾರಣ ಪ್ರತಿಭಟನೆಯನ್ನು ಸ್ಥಗಿತಗೊಳಿಸಿ ಪ್ರತಿಭಟನಾನಿರತ ಸಿಬ್ಬಂದಿ ತಂತಮ್ಮ ಊರುಗಳಿಗೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

(ಎನ್‍ಬಿ)

Leave a Reply

comments

Related Articles

error: