ಕರ್ನಾಟಕಪ್ರಮುಖ ಸುದ್ದಿ

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ತ್ಯಜಿಸುವುದಿಲ್ಲ : ಸಿ.ಎಂ ಇಬ್ರಾಹಿಂ

ರಾಜ್ಯ(ಬೆಂಗಳೂರು)ಫೆ.10:- `ನಾನು ಮತ್ತು ಮಖ್ಯಮಂತ್ರಿ ಸಿದ್ದರಾಮಯ್ಯ ಅಣ್ಣ-ತಮ್ಮಂದಿರಂತೆ ಇದ್ದೇವೆ. ನಮ್ಮಿಬ್ಬರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ’. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ತ್ಯಜಿಸುವುದಿಲ್ಲ.ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೇಂದ್ರದ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್‌ನತ್ತ ಸಿ.ಎಂ ಇಬ್ರಾಹಿಂ ಮುಖ ಮಾಡಿದ್ದಾರೆ ಎನ್ನುವ ವದಂತಿಗಳ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಈ ವಿಷಯ ಸ್ಪಷ್ಟಪಡಿಸಿದರು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರೊಂದಿಗೆ ತಮ್ಮ ಸಂಬಂಧ ಚೆನ್ನಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಮಾಡಿದಾಕ್ಷಣ ಪಕ್ಷ ಬಿಡುತ್ತೇನೆ ಎನ್ನುವುದೆಲ್ಲ ಸುಳ್ಳು. ನಾನು ಯಾವುದೇ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್, ಬಿಜೆಪಿ ಮೈತ್ರಿ ಹೈಕಮಾಂಡ್‌ಗೆ ಬಿಟ್ಟ ವಿಷಯ. ಈ ಬಗ್ಗೆ ಹಿರಿಯ ನಾಯಕರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ ಅವರು, ಇಂದಿನಿಂದ ರಾಜ್ಯದಲ್ಲಿ ರಾಹುಲ್‌ಗಾಂಧಿ ಕೈಗೊಂಡಿರುವ ಪ್ರವಾಸದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಿ.ಎಂ ಇಬ್ರಾಹಿಂ ನಡುವೆ ಅಸಮಾಧಾನದ ಹಿನ್ನೆಲೆಯಲ್ಲಿ ಇಬ್ರಾಹಿಂ ದೇವೇಗೌಡರನ್ನು ಭೇಟಿ ಮಾಡಿದ್ದರು ಎನ್ನಲಾಗಿದ್ದು, ಈ ವಿಷಯದ ಕುರಿತು ಇಬ್ಬರು ನಾಯಕರು ಸುದೀರ್ಘ ಚರ್ಚೆ ನಡೆಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: