ಕರ್ನಾಟಕ

ಮಂಡ್ಯದ ಮಕ್ಕಳ ಸಾವು: ಸರ್ಕಾರದಿಂದ 1 ಲಕ್ಷ ರೂ. ಪರಿಹಾರ ಘೋಷಣೆ

ಮಂಡ್ಯ (ಫೆ.12): ಚುಚ್ಚುಮದ್ದು ವ್ಯತಿರಿಕ್ತ ಪರಿಣಾಮದಿಂದ ಸಾವಿಗೀಡಾಗಿದ್ದಾರೆ ಎನ್ನಲಾದ ಮಕ್ಕಳ ಪೋಷರಿಗೆ ಸರ್ಕಾರ 1 ಲಕ್ಷ ರೂ.ಪರಿಹಾರ ಘೋಷಿಸಿದೆ. ಮಂಡ್ಯದಲ್ಲಿ ಇತ್ತೀಚೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಲಸಿಕೆ ಹಾಕಿದ ನಂತರ ಚಿಂದಗಿರಿದೊಡ್ಡಿ ಗ್ರಾಮದಲ್ಲಿ ಎರಡು ಮಕ್ಕಳು ಸಾವನ್ನಪ್ಪಿದ್ದವು.

ಅಂಗನವಾಡಿ ಕೇಂದ್ರದಲ್ಲಿ ಪೆಂಟಾವಲೆಂಟ್ ಚುಚ್ಚುಮದ್ದು ನೀಡಿದ ಬಳಿಕ ಅಸ್ವಸ್ಥಗೊಂಡ ಮಕ್ಕಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದವು. ಚುಚ್ಚುಮದ್ದು ನೀಡಿದ್ದರಿಂದಲೇ ಮಕ್ಕಳು ಮೃತಪಟ್ಟಿವೆ ಎಂದು ಜನರು ಆರೋಪಿಸಿ, ಪ್ರತಿಭಟನೆ ನಡೆಸಿದ್ದರು. ಇದೀಗ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ ಅವರು ಮಕ್ಕಳ ಕುಟುಂಬ ಸದಸ್ಯರಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ತನಿಖೆ ನಡೆಸಲಾಗುವುದು: ಸಚಿವ ಎಂ. ಕೃಷ್ಣಪ್ಪ

ಮಕ್ಕಳ ಸಾವಿನ ಕುರಿತು ತನಿಖೆ ನಡೆಸಲಾಗುವುದು. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಔಷಧಿ ಪೂರೈಕೆ ಮಾಡಿದ ಕಂಪನಿ ವಿರುದ್ಧ ಪ್ರಕರಣ ದಾಖಲು ಮಾಡಲಾಗುತ್ತದೆ’  ಎಂದು ಸಚಿವ ಎಂ.ಕೃಷ್ಣಪ್ಪ ಹೇಳಿದ್ದಾರೆ. ಸರ್ಕಾರದಿಂದ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸಚಿವ ಕೃಷ್ಣಪ್ಪ ಅವರು ವೈಯಕ್ತಿಕವಾಗಿ 50 ಸಾವಿರ, ಜೆಡಿಎಸ್ ಪಕ್ಷದಿಂದ 50 ಸಾವಿರ, ಜೆಡಿಎಸ್ ಮುಖಂಡ ಡಾ.ಎಚ್.ಕೃಷ್ಣ ಅವರು ವೈಯಕ್ತಿಕವಾಗಿ 50 ಸಾವಿರ, ಮುಡಾ ಅಧ್ಯಕ್ಷ ಮುನಾವರ್ ಖಾನ್ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

(ಎನ್‍ಬಿ)

Leave a Reply

comments

Related Articles

error: