ಮೈಸೂರು

ಫಾಲ್ಕನ್ ಟೈರ್ಸ್ ಕಾರ್ಖಾನೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಯತ್ನ: ಸಿಎಂ ಭರವಸೆ

imagesಬರ ಪರಿಸ್ಥಿತಿಯನ್ನು ನಿರ್ವಹಿಸಲು ಪ್ರತಿ ತಾಲೂಕಿಗೂ ತಲಾ 1 ಕೋಟಿ ರು. ಅನುದಾನ ನೀಡುವಂತೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಸರಕಾರವನ್ನು ಆಗ್ರಹಿಸಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಾತನಾಡಿ, ರಾಜ್ಯ ಸರಕಾರ ಅತೀ ಶೀಘ್ರವಾಗಿ ಕುಡಿಯುವ ನೀರಿಗೆ ಹಣ ಬಿಡುಗಡೆ ಮಾಡಬೇಕು. ಗೋಶಾಲೆಗಳನ್ನು ತೆರೆಯಬೇಕು. ಕೆರೆಕಟ್ಟೆಗಳಲ್ಲಿನ ಹೋಳೆತ್ತಬೇಕು. ಬರ ಇರುವ ತಾಲೂಕುಗಳಿಗೆ ಶಾಸಕರ ಅಧ್ಯಕ್ಷತೆಯಲ್ಲಿ 1 ಕೋಟಿ ಹಣ ಬಿಡುಗಡೆ ಮಾಡಬೇಕು. ಬಳಿಕ ಉಳಿದ 4 ಕೋಟಿ ರು. ಬಿಡುಗಡೆ ಮಾಡಬೇಕು ಎಂದರು.

ಫಾಲ್ಕನ್ ಸಮಸ್ಯೆ ಪ್ರಸ್ತಾಪ: ಅಧಿವೇಶನ ಮುಗಿದ ಬಳಿಕ ಬೆಂಗಳೂರಿನಲ್ಲಿ ಫಾಲ್ಕನ್‍ ಟೈರ್ಸ್ ಕಾರ್ಖಾನೆ ಮಾಲೀಕರು ಮತ್ತು ಕಾರ್ಮಿಕ ಮುಖಂಡರ ಸಭೆ ಕರೆದು ಸಮಸ್ಯೆ ಬಗೆಹರಿಸಲು ಯತ್ನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮಂಗಳವಾರ ರೈತರ ಸಾಲ ಮನ್ನಾಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಸಂದರ್ಭದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅವರು ಫಾಲ್ಕನ್ ಟೈರ್ಸ್ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಹಾಗೂ ಕಾರ್ಖಾನೆ ಪುನರಾರಂಭಕ್ಕೆ ಮಧ್ಯಪ್ರವೇಶಿಸಬೇಕೆಂದು ಸಿಎಂ ಅವರನ್ನು ಒತ್ತಾಯಿಸಿದರು. ಈಗಾಗಲೇ ಸಭೆ ನಡೆಸಲಾಗಿದ್ದು, ಇಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ. ಹೀಗಾಗಿ ಅಧಿವೇಶನ ಮುಗಿಯುತ್ತಿದ್ದಂತೆ ನಾನೇ ಸಭೆ ಕರೆದು ಪರಿಹಾರ ಸೂಚಿಸುತ್ತೇನೆ ಎಂದು ಸಿಎಂ ಭರವಸೆ ನೀಡಿದರು.

Leave a Reply

comments

Related Articles

error: