ಕರ್ನಾಟಕದೇಶಪ್ರಮುಖ ಸುದ್ದಿ

ಕೆ.ಆರ್.ಎಸ್ ಜಲಾಶಯಕ್ಕೆ ಪೊಲೀಸ್ ಭದ್ರತೆ: ತಮಿಳುನಾಡು ವಾಹನಗಳ ತಪಾಸಣೆ

ಮಂಡ್ಯ(ಫೆ.14): ತಮಿಳುನಾಡು ಕೇಳಿಕೊಂಡಿರುವಂತೆ ನೀರು ಬಿಡುಗಡೆ ಮಾಡಲು ಕರ್ನಾಟಕ ರಾಜ್ಯ ಸರ್ಕಾರ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮತ್ತು ತಮಿಳುನಾಡಿನ ಅಧಿಕಾರಿಗಳು ಹಾಗೂ ಸಚಿವರು ಕೃಷ್ಣರಾಜಸಾಗರ ಜಲಾಶಯಕ್ಕೆ ಭೇಟಿ ನೀಡಿದ್ದಾರೆ ಎನ್ನಲಾದ ಹಿನ್ನೆಲೆಯಲ್ಲಿ ಜಲಾಶಯಕ್ಕೆ ರಾಜ್ಯ ಸರ್ಕಾರ ಬಿಗಿಭದ್ರತೆ ಕಲ್ಪಿಸಿದೆ.

ಕೆ.ಆರ್.ಎಸ್ ಅಣೆಕಟ್ಟೆಯ ಸಮೀಪ ಹೆಚ್ಚುವರಿ ಬ್ಯಾರಿಕೇಡ್‍ಗಳನ್ನು ಹಾಕಲಾಗಿದೆ. ಅಲ್ಲದೆ ಪ್ರತಿಯೊಬ್ಬರ ಚಲನವಲನದ ಮೇಲೆ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ತಮಿಳುನಾಡಿನ ನೋಂದಣಿ ಸಂಖ್ಯೆ ಇರುವ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.

ತಮಿಳುನಾಡಿನ ಅಧಿಕಾರಿಗಳು ಅಣೆಕಟ್ಟೆ ವೀಕ್ಷಣೆ ಕುರಿತಂತೆ ಊಹಪೋಹ ಎದ್ದಿರುವ ಹಿನ್ನೆಲೆಯಲ್ಲಿ ಈ ಬಂದೋಬಸ್ತ್ ಮಾಡಲಾಗಿದೆ. ಜಲಾಶಯದಲ್ಲಿ ನೀರಿಲ್ಲದ ಕಾರಣ ತಮಿಳುನಾಡಿಗೆ ಪೂರೈಸಲು ಸಾಧ್ಯವಿಲ್ಲ ಎಂದು ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ತಮಿಳನಾಡು ಮುಖ್ಯಮಂತ್ರಿ ಯಡಪ್ಪಾಡಿ ಕೆ.ಪಳನಿಸ್ವಾಮಿ ಅವರು ನೀರು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ.

(ಎನ್‍ಬಿ)

Leave a Reply

comments

Related Articles

error: