ಮೈಸೂರು

ವಿಭಜಕದ ಮೇಲ್ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು

ಮೈಸೂರು,ಫೆ.15:- ಕಾರೊಂದು ರಸ್ತೆ ವಿಭಜಕದ ಮೇಲ್ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು,ಯಾವುದೇ ಅಪಾಯ ಸಂಭವಿಸದೇ  ಭಾರಿ ಅನಾಹುತವೊಂದು ತಪ್ಪಿದೆ.

ಮೈಸೂರಿನ ಜೆಸಿ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ  KA 09 MA 2469 ನಂಬರ್ ನ ಇನೋವಾ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಈ ಘಟನೆ ನಡೆದಿದೆ. ಅಪಘಾತ ವೇಳೆ ಕಾರಿನಲ್ಲಿದ್ದ ವ್ಯಕ್ತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾಸ್ಥಳಕ್ಕೆ ವಿವಿ ಪುರಂ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: