ಮೈಸೂರು

ಉಚಿತ ಲ್ಯಾಪ್ ಟಾಪ್ ಸೌಲಭ್ಯ ವಿಸ್ತರಣೆಗೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಫೆ.15:- ಉಚಿತ ಲ್ಯಾಪ್ ಟಾಪ್ ಸೌಲಭ್ಯ ವಿಸ್ತರಣೆಗೆ ಒತ್ತಾಯಿಸಿ ಮೈಸೂರಿನ ಮಹಾರಾಜ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಗುರುವಾರ ತರಗತಿಗಳನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು, ಕಾಲೇಜು ಎದುರು ಪ್ರತಿಭಟನೆ ನಡೆಸಿದ್ದು, ಉಚಿತ ಲ್ಯಾಪ್ ಟಾಪ್ ವಿತರಣೆ ಸೌಲಭ್ಯವನ್ನು ಮಹಾರಾಜ ಕಾಲೇಜು ವಿದ್ಯಾರ್ಥಿಗಳಿಗೂ ವಿಸ್ತರಿಸುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಯು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಜೇಶನ್ ನೇತೃತ್ವದಲ್ಲಿ  ನಡೆಯಿತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: