ಮೈಸೂರು

ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಹೊರತರದಿದ್ದಲ್ಲಿ ದೇಶದ ಪ್ರಗತಿ ಸಾಧ್ಯವಿಲ್ಲ: ಪ್ರೊ. ರಂಗಪ್ಪ

ಮೈಸೂರು ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಬುಧವಾರ ವಿಶ್ವವಿದ್ಯಾನಿಲಯ ಸ್ಪರ್ಧಾ ಕೇಂದ್ರ, ನೇಗಿಲಯೋಗಿ ವಿದ್ಯಾವರ್ಧಕ ಸ್ಪರ್ಧಾ ಕೇಂದ್ರ ಸಹಯೋಗದಲ್ಲಿ ನಿರಂತರ ವೃತ್ತಿ ಮಾಹಿತಿ, ಮಾರ್ಗದರ್ಶನ ಮತ್ತು ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ತರಬೇತಿ ಕೇಂದ್ರವನ್ನು ಮೈಸೂರು ವಿವಿ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ ಅವರು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಸಿದರು. ಬಳಿಕ ಮಾತನಾಡಿದ ಅವರು, ಯುವ ಪೀಳಿಗೆಯ ಬೆಳವಣಿಗೆಗೆ ಹಾಗೂ ಅವರ ಅಭಿವೃದ್ಧಿಗಾಗಿ ನೂತನ ಕೇಂದ್ರವನ್ನು ತೆರೆಯಲಾಗಿದೆ. ಈ ಕೇಂದ್ರದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಕೇಂದ್ರಕ್ಕೆ ಬೇಕಾದ ಅನುಕೂಲಗಳನ್ನು ವಿಶ್ವವಿದ್ಯಾನಿಲಯದಿಂದ ವ್ಯವಸ್ಥೆ ಮಾಡಲಾಗಿದೆ. ಮುಂದೆಯೂ ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸಿಕೊಡಲಾಗುವುದು ಎಂದರು.

ಸರಿಯಾದ ತರಬೇತಿ ಮತ್ತು ಮಾಹಿತಿಯ ಅವಶ್ಯಕತೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಇದೆ. ಅದನ್ನು ಅವರಿಗೆ ನೀಡಬೇಕು. ಹೆಚ್ಚು ಪ್ರತಿಭೆ ಇರುವುದು ಗ್ರಾಮೀಣ ವಿದ್ಯಾರ್ಥಿಗಳಲ್ಲೇ. ಅವರ ಪ್ರತಿಭೆಗಳನ್ನು ಹೊರತರದಿದ್ದರೆ ದೇಶದ ಪ್ರಗತಿ ಸಾಧ್ಯವಿಲ್ಲ. ವಿಶ್ವವಿದ್ಯಾನಿಲಯಗಳು ಉನ್ನತ ಮಟ್ಟಕ್ಕೇರಲು ಸಾಧ್ಯವಿಲ್ಲ ಎಂದರಲ್ಲದೇ ವಿದ್ಯಾರ್ಥಿಗಳು ಇಂತಹ ಕೇಂದ್ರಗಳಲ್ಲಿ ನೀಡುವ ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಮಟ್ಟಕ್ಕೆ ಏರಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಿ. ರಂದೀಪ್, ಮಹಾರಾಜ ಕಾಲೇಜು ಪ್ರಾಂಶುಪಾಲ ಪ್ರೊ. ಕೆ. ಕಾಳಚನ್ನೆಗೌಡ, ನೇಗಿಲಯೋಗಿ ಸಂಸ್ಥೆಯ ಅಧ್ಯಕ್ಷ ಡಾ. ಕೆ.ಎನ್. ಚಂದ್ರಶೇಖರ್, ಗೌರವ ಸಲಹೆಗಾರ ಡಿ. ರವಿಕುಮಾರ್, ಸಂಯೋಜಕ ಡಾ. ಹೆಚ್.ಎಂ. ರಾಮಕೃಷ್ಣೇಗೌಡ ಉಪಸ್ಥಿತರಿದ್ದರು.

Leave a Reply

comments

Related Articles

error: