ಕರ್ನಾಟಕ

ಮಾನಸಿಕ ಸ್ಥಿಮಿತ ಕಳೆದುಕೊಂಡ ತಾಯಿ ಮಕ್ಕಳೊಂದಿಗೆ ಸಜೀವ ದಹನ

ಬೆಂಗಳೂರು,ಫೆ,16: ಮಾನಸಿಕ ಸ್ಥಿಮಿತ ಕಳೆದುಕೊಂಡ ತಾಯಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಮಕ್ಕಳನ್ನು ತಬ್ಬಿಕೊಂಡು ಮೂವರು ಸಜೀವವಾಗಿ ದಹನವಾಗಿರುವ ಘಟನೆ ನಗರದ ಸಂಜಯ್‍ನಗರ ಬಳಿ ನಡೆದಿದೆ.

ತಮಿಳುನಾಡು ಮೂಲದ ಕುಟುಂಬದವರಾದ ಜಸ್ವಂತ್ (4) ಮತ್ತು ಮಗಳು ಹಾಸಿನಿ(2) ತಾಯಿಯಿಂದಲೇ ಸಜೀವ ದಹನವಾದ ದುರ್ದೈವಿಗಳು. ಗುರುವಾರ ಬೆಳಗ್ಗೆ 8.30ರ ವೇಳೆಗೆ ರಾಮಲಮ್ಮ ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಾಲ್ಕು ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ತಾಯಿ ರಾಮಲಮ್ಮ ಮಾನಸಿಕ ಸ್ಥಿಮಿತ ಕಳೆದುಕೊಂಡ ಗಂಡ ಕೆಲಸಕ್ಕೆ ಹೋದ ತಕ್ಷಣ ಮನೆಯೊಳಗೆ ಮೊದಲು ಇಬ್ಬರು ಮಕ್ಕಳಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಬಳಿಕ ತಾನೂ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಮಕ್ಕಳನ್ನು ತಪ್ಪಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆರೆಹೊರೆಯವರು ಕಾಪಾಡಲು ಪ್ರಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗಿಲ್ಲ. ಕೊನೆಗೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಎಚ್‍ಎಎಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ( ವರದಿ: ಪಿ.ಎಸ್ )

Leave a Reply

comments

Related Articles

error: