ಮೈಸೂರು

ಉಚಿತ ಮಧುಮೇಹ ತಪಾಸಣೆ

ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲಿರುವ ಸಿದ್ದಪ್ಪಾಜಿ ಸಮುದಾಯ ಭವನದಲ್ಲಿ ಬುಧವಾರ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ವಿಶ್ವಮಧುಮೇಹ ದಿನದ  ಅಂಗವಾಗಿ  ಮೈಸೂರಿನ ಜೆ.ಎಸ್.ಎಸ್.ನರ್ಸಿಂಗ್ ಕಾಲೇಜು ವತಿಯಿಂದ ಆಯೋಜಿಸಲಾದ ಉಚಿತ ಮಧುಮೇಹ ತಪಾಸಣಾ ಶಿಬಿರದಲ್ಲಿ ನುರಿತ ವೈದ್ಯರು ಪಾಲ್ಗೊಂಡು ತಪಾಸಣೆ ನಡೆಸಿದರು. ಶಿಬಿರದಲ್ಲಿ ಮಹಾನಗರ ಪಾಲಿಕೆಯ ಸದಸ್ಯ ಎಸ್. ಬಾಲು ಅತಿಥಿಯಾಗಿ ಪಾಲ್ಗೊಂಡಿದ್ದರು. ನೂರಾರು ಶಿಬಿರಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

Leave a Reply

comments

Related Articles

error: