ಕರ್ನಾಟಕ

ಕಾವೇರಿ ವಿವಾದ ತೀರ್ಪು : ಅಸಮಾಧಾನ ವ್ಯಕ್ತಪಡಿಸಿದ ನಟ ರಜನಿಕಾಂತ್ ವಿರುದ್ಧ ಪ್ರತಿಭಟನೆ

ರಾಜ್ಯ(ರಾಮನಗರ)ಫೆ.17:-  ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಕರ್ನಾಟಕ ರಾಜ್ಯದಪರ ತೀರ್ಪು ನೀಡಿದ ಹಿನ್ನೆಲೆಯಲ್ಲಿ ತಮಿಳುನಾಡು ಸ್ಟಾರ್ ನಟ ರಜಿನಿಕಾಂತ್ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದನ್ನು ಖಂಡಿಸಿ  ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ಚನ್ನಪಟ್ಟಣದ ಚರ್ಚ್ ರಸ್ತೆಯಲ್ಲಿ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ರಜಿನಿಕಾಂತ್ ಭಾವಚಿತ್ರ, ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.ಈ ಕೂಡಲೇ ರಜನಿಕಾಂತ್ ಕನ್ನಡಿಗರಿಗೆ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.ತಮಿಳುನಾಡು ರೈತರಿಗೆ ಅನ್ಯಾಯವಾಗಿದೆ. ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ತಮಿಳುನಾಡು ಸರ್ಕಾರಕ್ಕೆ ಟ್ವೀಟ್ ಮೂಲಕ ರಜಿನಿಕಾಂತ್ ಮನವಿ ಮಾಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: