ಮೈಸೂರು

ಇಂದು ಮೈಸೂರಿನಲ್ಲಿ ನಡೆಯಬೇಕಿದ್ದ ಪ್ರತಿಭಟನೆಯ ನೇತೃತ್ವವಹಿಸಬೇಕಿದ್ದರು ಪುಟ್ಟಣ್ಣಯ್ಯ

ಮೈಸೂರು,ಫೆ.19:- ಇಂದು ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮೋದಿ ವಿರುದ್ಧ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಪ್ರತಿಭಟನೆ ಹಮ್ಮಿಕೊಂಡಿದ್ದರು ಎನ್ನಲಾಗಿತ್ತು. ಆದರೆ ನಿನ್ನೆ ಸಂಜೆಯೇ ಕಾಲನ ಕರೆಗೆ ಓಗೊಟ್ಟಿರುವುದು ಮಾತ್ರ ಹೋರಾಟಗಾರರಲ್ಲಿ ದುಃಖವನ್ನುಂಟು ಮಾಡಿದೆ.

ಮೋದಿ ವಿರುದ್ಧ  ಮೈಸೂರಿನ ಗಾಂಧಿವೃತ್ತದಲ್ಲಿ ನಡೆಯಬೇಕಿದ್ದ ಪ್ರತಿಭಟನೆಯಲ್ಲಿ ಪುಟ್ಟಣ್ಣಯ್ಯ ಭಾಗಿಯಾಗಬೇಕಿದ್ದರು. 2000 ರೈತರ ನೇತೃತ್ವ ವಹಿಸಬೇಕಿದ್ದ ಅವರು ರೈತರ ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ತೊಗರಿ ಆಮದು ವಿರೋಧಿಸಿ ಪ್ರತಿಭಟನೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಗೆ ರೈತರೂ ಕೂಡ ಸಿದ್ಧತೆ ಮಾಡಿಕೊಂಡಿದ್ದರು. ಇಂದು ಬೆಳಿಗ್ಗೆಯೇ ಮೈಸೂರಿಗೆ ಆಗಮಿಸುವುದಾಗಿ ಹೇಳಿದ್ದರು. ಆದರೆ ಕಳೆದ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದಿಂದ ರೈತ ಸಮುದಾಯ ಕಂಬನಿ ಮಿಡಿದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: