ಮೈಸೂರು

ಕೆ.ಎಸ್. ಪಟ್ಟಣ್ಣಯ್ಯ ಅವರ ನಿಧನಕ್ಕೆ ಗಣ್ಯರ ಸಂತಾಪ

ಮೈಸೂರು,ಫೆ.19:- ಸರ್ವೋದಯ ಪಕ್ಷದ ಶಾಸಕರು ಹಾಗೂ ರೈತ ಹೋರಾಟಗಾರರಾದ ಕೆ.ಎಸ್. ಪಟ್ಟಣ್ಣಯ್ಯ ಅವರ ನಿಧನಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ, ಸಂತಾಪ ವ್ಯಕ್ತಪಡಿಸಿದ್ದಾರೆ.

ಪುಟ್ಟಣ್ಣಯ್ಯ ರೈತರ ಮುಖಂಡರಾಗಿ ರೈತರ ಪರವಾಗಿ ಹಲವಾರು ಹೋರಾಟಗಳನ್ನು ಮಾಡಿದ್ದಾರೆ. ಬಡವರ, ಮಹಿಳೆಯರ, ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.

ಸಂಸದರಾದ ಆರ್. ಧ್ರುವನಾರಾಯಣ್, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಹೆಚ್. ಎ. ವೆಂಕಟೇಶ್ ಅವರು ಸಹ ಕೆ. ಎಸ್. ಪುಟ್ಟಣ್ಣಯ್ಯ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: