ಕರ್ನಾಟಕಪ್ರಮುಖ ಸುದ್ದಿ

ಜನರಲ್ ಬೋಗಿಯಲ್ಲಿ ಪ್ರಯಾಣಿಸಿದ ಸಚಿವ ಪಿಯೂಶ್ ಗೋಯಲ್

ಬೆಂಗಳೂರು,ಫೆ.20-ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ರೈಲ್ವೆ ಸ್ಥಿತಿಗತಿಯ ಬಗ್ಗೆ ತಿಳಿಯುವ ಸಲುವಾಗಿ ಮೈಸೂರಿನಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸಿದರು.

ಸೋಮವಾರ ಕಾವೇರಿ ಎಕ್ಸ್ ಪ್ರೆಸ್ ರೈಲಿನಲ್ಲಿ ಜನರಲ್ ಕೋಚ್ ನಲ್ಲಿ ಪ್ರಯಾಣಿಸಿದ ಪಿಯೂಶ್ ಗೋಯಲ್ ಸಹ ಪ್ರಯಾಣಿಕರೊಂದಿಗೆ ರೈಲ್ವೆ ವ್ಯವಸ್ಥೆಯ ಕುಂದು-ಕೊರತೆಗಳ ಬಗ್ಗೆ ಚರ್ಚಿಸಿದರು.

ಮೈಸೂರುರ ರೈಲ್ವೆ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮೈಸೂರು ಮತ್ತು ರಾಜಸ್ಥಾನದ ಉದಯಪುರ ನಡುವೆ ಸಂಚರಿಸುವ ಪ್ಯಾಲೇಸ್ ಕ್ವೀನ್ ಹಮ್ ಸಫರ್ ಎಕ್ಸ್ ಪ್ರೆಸ್ ರೈಲು ಸೇವೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗಹಿಸಿದ್ದ ಅವರು ನಂತರ ರೈಲಿನಲ್ಲಿ ಬೆಂಗಳೂರು ತಲುಪಿದ್ದು ವಿಶೇಷವಾಗಿತ್ತು. (ವರದಿ-ಎಂ.ಎನ್)

Leave a Reply

comments

Related Articles

error: