
ಮೈಸೂರು
ಟ್ರಾವೆಲ್ ಅಸೋಸಿಯೇಷನ್ ಕನ್ನಡ ರಾಜ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ
ಮೈಸೂರು ಟ್ರಾವೆಲ್ ಅಸೋಸಿಯೇಷನ್ ಮತ್ತು ಹೋಟೆಲ್ ಮಾಲೀಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನ. 23 ಬುಧವಾರ ಜಗನ್ಮೋಹನ ಅರಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಿಯೋ ಮೆರಿಡಿಯನ್ ಹೋಟೆಲ್ ವೆಬ್`ಸೈಟ್ ಅನ್ನು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎಂ. ಚಂದ್ರಶೇಖರ್ ಅವರು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. (ಎಡದಿಂದ) ಮಾಜಿ ಯೋಧರಾದ ಎ.ಎಲ್. ರಾಜು, ಕನ್ನಡ ಹೋರಾಟಗಾರರಾದ ಸಿ. ಸಂಪತ್, ಮಾಜಿ ಯೋಧರಾದ ಎಲ್. ಸಿದ್ದಪ್ಪಾಜಿ ಸನ್ಮಾನಿತರಾದ ಗಣ್ಯರು. ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣ ಗೌಡ, ಮೈಸೂರು ಟ್ರಾವೆಲ್ ಅಸೋಸಿಯೇಷನ್ ಅಧ್ಯಕ್ಷ ಸಿ.ಎ. ಜಯಕುಮಾರ್, ಹೋಟೆಲ್ ಮಾಲೀಕರ ಸಂಘದ ಚಾರಿಟಬಲ್ ಟ್ರಸ್ಟ್ ಉಪಾಧ್ಯಕ್ಷ ಸುರೇಶ್, ರಿಯೋ ಮೆರಿಡಿಯನ್ ವ್ಯವಸ್ಥಾಪಕ ನಿರ್ದೇಶಕರಾದ ಪ್ರವೀಣ್ ಕುಮಾರ್, ಸೇಫ್ವೀಲ್ ಟ್ರಾವೆಲ್ಸ್ ಮಾಲೀಕ ಪ್ರಶಾಂತ್, ಕನ್ನಡ ರಾಜ್ಯೋತ್ಸವ ಸಮಿತಿ ಉಪಾಧ್ಯಕ್ಷ ಎ.ಜೆ. ಅಶೋಕ್ ಅವರು ಉಪಸ್ಥಿತರಿದ್ದರು.