ಮೈಸೂರು

ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಸುರಿದ ತ್ಯಾಜ್ಯಕ್ಕೆ ಬೆಂಕಿ

ಮೈಸೂರು,ಫೆ.20:- ಮೈಸೂರು ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಸುರಿದ ತ್ಯಾಜ್ಯಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿ ಎಸೆದ ಕಾರಣ  ಬೆಂಕಿ ಧಗಧಗನೆ ಹೊತ್ತಿ ಉರಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಸುರಿದ ತ್ಯಾಜ್ಯಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದೆಂದು ಹೇಳಲಾಗಿದ್ದು, ಬೆಂಕಿ ಕ್ಷಣಾರ್ಧದಲ್ಲಿ ಇಡೀ ಪ್ರದೇಶವನ್ನು ವ್ಯಾಪಿಸಿತ್ತು. ಬೆಂಕಿ ಉರಿಯುತ್ತಿರುವುದನ್ನು ಕಂಡ ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು, ಬನ್ನಿಮಂಟಪದಲ್ಲಿರುವ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ಆರಿಸಲು ಹರಸಾಹಸಪಟ್ಟರು. ಬಹಳ ಹೊತ್ತಿನ ಬಳಿಕ ಬೆಂಕಿಯನ್ನು ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿತ್ತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: