ಕರ್ನಾಟಕಪ್ರಮುಖ ಸುದ್ದಿ

ಕಾಂಗ್ರೆಸ್ ನಿಂದ ನಾರಾಯಣಸ್ವಾಮಿ ಉಚ್ಚಾಟನೆ; ಬಂಧನಕ್ಕೆ ನಾಲ್ಕು ತಂಡ ರಚನೆ

ಬೆಂಗಳೂರು,ಫೆ.20-ಗೂಂಡಾ ವರ್ತನೆ ತೋರಿದ್ದ ಶಾಸಕ ಭೈರತಿ ಬಸವರಾಜ ಅವರ ಆಪ್ತ ಕೆ.ಆರ್.ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿಯನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ಅಲ್ಲದೆ, ತಲೆಮರೆಸಿಕೊಂಡಿರುವ ಈತನ ಬಂಧನಕ್ಕಾಗಿ ಪೂರ್ವ ವಿಭಾಗ ಡಿಸಿಪಿ ಅಜಯ್ ಹಿಲೋರಿ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.

ಹೊರಮಾವು ಬಿಬಿಎಂಪಿ ಕಂದಾಯ ಕಚೇರಿಗೆ ನುಗ್ಗಿದ ನಾರಾಯಣಸ್ವಾಮಿ ಅಧಿಕಾರಿಗೆ ಧಮ್ಕಿ ಹಾಕಿದ್ದಲ್ಲದೆ, ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವುದಾಗಿ ಬೆದರಿಕೆಯೊಡ್ಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾರಾಯಣಸ್ವಾಮಿ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353,427, 341, 504, 506ರ ಅಡಿ ಎಫ್‌ಐಆರ್ ದಾಖಲಾಗಿದೆ.

ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಆತನನ್ನು ಕೂಡಲೇ ಒದ್ದು ಒಳಗೆ ಹಾಕಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಜತೆಗೆ ಬಿಡಬ್ಲ್ಯುಎಸ್ ಎಸ್ ಬಿ ಸದಸ್ಯ ಸ್ಥಾನದಿಂದಲೂ ನಾರಾಯಣ ಸ್ವಾಮಿಯನ್ನು ವಜಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. (ವರದಿ-ಎಂ.ಎನ್)

Leave a Reply

comments

Related Articles

error: