ಮೈಸೂರು

ನೆರೆ ರಾಜ್ಯಕ್ಕೆ ಮೇವು ಸಾಗಣೆ ತಡೆಯುವಂತೆ ಜಿಲ್ಲಾಧಿಕಾರಿ ಪತ್ರ

ಮೈಸೂರು ಜಿಲ್ಲೆಯಲ್ಲಿ ಲಭ್ಯವಿರುವ ಮೇವನ್ನು ಹೊರಾರಾಜ್ಯಗಳಿಗೆ ಸಾಗಾಣಿಕೆ ಮಾಡುವುದನ್ನು ತಡೆಗಟ್ಟಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಅಧಿಕಾರಿಗಳಿಗೆ ಪತ್ರದ ಮೂಲಕ ಸೂಚಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಮಳೆಯಿಲ್ಲದೆ ಜಿಲ್ಲೆಯಲ್ಲಿ ಬರ ಆವರಿಸಿಕೊಂಡಿದ್ದು ಜಿಲ್ಲೆಯ ಏಳು ತಾಲೂಕುಗಳು ಬರಪೀಡಿತವೆಂದು ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಗಳಿಗೆ ಬರವನ್ನು ಎದುರಿಸಲು ಮುಂಜಾಗೃತಾ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪತ್ರಗಳನ್ನು ಜಿಲ್ಲೆಯ ಎಲ್ಲ ತಾಲೂಕುಗಳ ತಹಸೀಲ್ದಾರರಿಗೆ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕರಿಗೆ ಹಾಗೂ ಮೈಸೂರು ಜಿಲ್ಲಾ ಪೊಲೀಸ್‍ ಅಧೀಕ್ಷಕರಿಗೆ ಬರೆದಿದ್ದು ಈ ಬಾರಿ ನಿರೀಕ್ಷೆಗಿಂತ ಕಡಿಮೆ ಮಳೆಯಾಗಿದೆ. ಮುಂಬರುವ ದಿನಗಳಲ್ಲಿ ಜಾನುವಾರಿಗೆ ಮೇವಿನ ಕೊರತೆಯುಂಟಾಗುವ ಸಾಧ್ಯತೆಗಳಿವೆ. ಹೊರರಾಜ್ಯಗಳಿಗೆ ಮೇವು ಸಾಗಾಣಿಕೆಯಾಗದಂತೆ ಎಚ್ಚರಿಕೆ ವಹಿಸಬೇಕು, ಸಾಗಾಣಿಕೆ ಮಾಡುವುದ ಕಂಡುಬಂದಲ್ಲಿ ಕಟ್ಟುನಿಟ್ಟಿನ ಶಿಸ್ತುಕ್ರಮ ಕೈಗೊಳ್ಳಬೇಕು ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಡಳಿತಕ್ಕೆ ತಿಳಿಸುವಂತೆ ಪತ್ರದಲ್ಲಿ ಕೋರಿದ್ದಾರೆ.

Leave a Reply

comments

Related Articles

error: