ಮೈಸೂರು

ನಾಲ್ಕನೆ ದಿನವೂ ಮುಂದುವರಿದ ರೈತರ ಧರಣಿ

ಹಲವು ವರ್ಷಗಳಿಂದ ಬರ ಮತ್ತು ಸುದೀರ್ಘ ಸಂಕಷ್ಟದ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ಸಮಗ್ರ ಬರ ನಿರ್ವಹಣೆಗೆ ಒತ್ತಾಯಿಸಿ ರೈತರ ಕೃಷಿ, ಕಾರ್ಮಿಕರ ಮತ್ತು ಸ್ವಸಹಾಯ ಸಂಘಗಳ ಸಂಪೂರ್ಣ ಸಾಲಮನ್ನಾ ಮಾಡಲು ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡಲೇಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಜನಶಕ್ತಿ, ಸ್ವರಾಜ್ ಅಭಿಯಾನ ಸಹಯೋಗದೊಂದಿಗೆ ನವೆಂಬರ್ 21ರಿಂದ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಅನಿರ್ದಿಷ್ಟ ಕಾಲಾವಧಿ ಧರಣಿ ಹಮ್ಮಿಕೊಳ್ಳಲಾಗಿದ್ದು ಗುರುವಾರ ನಾಲ್ಕನೇ ದಿನಕ್ಕೆ ಕಾಲಿರಿಸಿದೆ.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟ ಕಾಲಾವಧಿ ಧರಣಿ ನಡೆಯುತ್ತಿದ್ದು, ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Leave a Reply

comments

Related Articles

error: