ಕರ್ನಾಟಕಪ್ರಮುಖ ಸುದ್ದಿ

ಕಾಂಗ್ರೆಸ್‍ ಸೇರ್ತಾರಾ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್!?

ಹೊಸದಿಲ್ಲಿ (ಫೆ.22): ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್‍ ಬಚ್ಚನ್ ಅವರು ಅನೇಕ ಕಾಂಗ್ರೆಸ್ ನಾಯಕರನ್ನು ಟ್ವೀಟರ್‍ನಲ್ಲಿ ಫಾಲೋ ಮಾಡಲು ಆರಂಭಿಸಿರುವ ಸುದ್ದಿ ಬೇರೆ ರೀಯಲ್ಲಿ ಪ್ರಚಾರ ಪಡೆದುಕೊಂಡಿದ್ದು, ಬಿಗ್‍ ಬೀ ಕಾಂಗ್ರೆಸ್ ಪಕ್ಷ ಸೇರುವರೇ ಎಂಬ ಚರ್ಚೆ ಹುಟ್ಟಿಕೊಳ್ಳಲು ಕಾರಣವಾಗಿದೆ.

ಬಚ್ಚನ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್‍ನ ಅಧಿಕೃತ ಪುಟವನ್ನು ಫಾಲೋ ಮಾಡಲು ಆರಂಭಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕರಾದ ಮನೀಶ್ ತಿವಾರಿ, ಪಿ.ಚಿದಂಬರಂ, ಕಪಿಲ್ ಸಿಬಲ್, ಅಹ್ಮದ್ ಪಟೇಲ್, ಅಶೋಕ್ ಗೆಹ್ಲೋಟ್, ಅಜಯ್ ಮಕೆನ್, ಜ್ಯೋತಿರಾಧಿತ್ಯ ಸಿಂಧಿಯಾ, ಸಚಿನ್ ಪೈಲಟ್ ಮತ್ತು ಸಿಪಿ ಜೋಶಿ ಅವರನ್ನು ಈ ತಿಂಗಳಲ್ಲಿ ಫಾಲೋ ಮಾಡಲು ಆರಂಭಿಸಿದ್ದಾರೆ.

ನೆಹರು-ಗಾಂಧಿ ಕುಟುಂಬಕ್ಕೆ ಒಂದು ಕಾಲದಲ್ಲಿ ಬಹಳ ಆಪ್ತರಾಗಿದ್ದ ಅಮಿತಾಬ್ ಬಚ್ಚನ್ ಅವರು, ರಾಜೀವ್ ಗಾಂಧಿಗೆ ಅತ್ಯುತ್ತಮ ಸ್ನೇಹಿತರಾಗಿದ್ದರು. ಪ್ರಸ್ತುತ ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್‍ಗೆ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವು ಬಿಜೆಪಿ ನಾಯಕರನ್ನೂ ಅಮಿತಾಬ್ ಬಚ್ಚನ್ ಅವರು ಫಾಲೋ ಮಾಡುತ್ತಿದ್ದಾರೆ. ಆದರೆ ಅವರು ಒಂದೇ ತಿಂಗಳಿನಲ್ಲಿ ಹಲವು ಕಾಂಗ್ರೆಸ್ ನಾಯಕರನ್ನು ಟ್ವಿಟರ್‍ನಲ್ಲಿ ಫಾಲೋ ಮಾಡಲು ಆರಂಭಿಸಿರುವ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೇರಬಹುದೇ ಎಂಬ ಚರ್ಚೆಗಳು ಹುಟ್ಟುಕೊಂಡಿವೆ.

ಟ್ವೀಟರ್ ಖಾತೆಯಲ್ಲಿ 3.13 ಕೋಟಿ ಫಾಲೋವರ್ಸ್ ಹೊಂದಿರುವ ಅಮಿತಾಬ್‍ ಬಚ್ಚನ್, ತಾವು 1,730 ಮಂದಿಯನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ.

(ಎನ್‍.ಬಿ)

Leave a Reply

comments

Related Articles

error: