ಮೈಸೂರು

ಶಾಲಾ ವಾರ್ಷಿಕ ಸಂಗೀತೋತ್ಸವಕ್ಕೆ ಚಾಲನೆ ನೀಡಿದ ಡಾ.ಸರ್ವಮಂಗಳ ಶಂಕರ್

ಮೈಸೂರು,ಫೆ.23-ಪೀಪಲ್ಸ್ ಪಾರ್ಕ್ ಶಾಲಾ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಶಾಲಾ ವಾರ್ಷಿಕ ಸಂಗೀತೋತ್ಸವವನ್ನು ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಲಲಿತ ಕಲೆಗಳ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಸರ್ವಮಂಗಳ ಶಂಕರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲ ಆರ್.ಗೋವಿಂದ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಎಸ್.ನಾಗರಾಜು, ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಮು, ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ಮಂಜುನಾಥ, ಕಾಲೇಜಿನ ಹಿರಿಯ ಉಪನ್ಯಾಸಕ ಸಿದ್ದಯ್ಯ, ಉಪಪ್ರಾಂಶುಪಾಲ ಬಿ.ಸೋಮಶೇಖರ್ ಉಪಸ್ಥಿತರಿದ್ದರು. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: