ಕರ್ನಾಟಕ

ಹೊಟ್ಟೆ ನೋವು ತಾಳಲಾಗದೆ ವ್ಯಕ್ತಿ ಆತ್ಮಹತ್ಯೆ

ಬ್ಯಾಡಗಿ, ಫೆ 23: ಹೊಟ್ಟೆ ನೋವು ತಾಳಲಾಗದೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡಗಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಪಟ್ಟಣದಗಾಂಧಿ ನಗರದ ನಿವಾಸಿ ಬಂಗಾರೆಪ್ಪ ಹನುಮಂತಪ್ಪಆಲೂರ (34)ಎಂದು ಗುರುತಿಸಿಲಾಗಿದೆ. ಹಲವಾರು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರು ನೋವನ್ನು ತಾಳಲಾಗದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಮನಿಸಿದ ಕುಟುಂಬಸ್ಥರು ಅವರನ್ನು ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಗೆಂದು ಕರೆದುಕೊಂಡು ಹೋದರು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‍ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್‍ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ವರದಿ: ಪಿ.ಎಸ್ )

Leave a Reply

comments

Related Articles

error: