ಮೈಸೂರು

ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆಗೆ ಶರಣು

ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆಟೋ ಚಾಲಕರೊಬ್ಬರು ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ದಳವಾಯಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಡಿತದ ಚಟದಿಂದ ಹೆಚ್ಚು ಸಾಲ ಮಾಡಿಕೊಂಡಿದ್ದ ಶಂಕರ್ (35) ಮೃತ ದುರ್ದೈವಿ.  ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷ ಸೇವಿಸಿ ಆತ್ಮಹತ್ಯೆ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೈಸೂರಿನ ರಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಪವಿತ್ರ (40) ಆತ್ಮಹತ್ಯೆಗೆ ಶರಣಾದ ಗೃಹಿಣಿಯಾಗಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: