ಮೈಸೂರು

ಬೈಕ್‍ಗೆ ಕ್ಯಾಂಟರ್ ಡಿಕ್ಕಿ : ಸವಾರ ಸಾವು

ಮೈಸೂರು,ಫೆ.24:- ಬೈಕ್‍ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧ್ಯಾಹ್ನ ನಡೆದಿದೆ.

ಮೃತರನ್ನು ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಅಸ್ಲಾಂ ಪಾಷ (39) ಎಂದು ಹೇಳಲಾಗಿದ್ದು, ತಾಲೂಕಿನ ಗೊರಳ್ಳಿ ಗ್ರಾಮದ ಬಳಿ ಬರುತ್ತಿದ್ದಾಗ ಹಿಂಬದಿಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಸಂಬಂಧ ಬೆಟ್ಟದಪುರ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: