ಮೈಸೂರು

ಸಾಮೂಹಿಕ ಸತ್ಯನಾರಾಯಣ ಪೂಜೆಗೆ ಸಕಲ ಸಿದ್ಧತೆ

ಮೈಸೂರು,ಫೆ.24-ಲೋಕಕಲ್ಯಾಣಕ್ಕಾಗಿ ಹಾಗೂ ಹಿಂದುತ್ವದ ಸಂಘಟನೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಫೆ.25 ರಂದು ಆಯೋಜಿಸಿರುವ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.

ಅಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30 ರವರೆಗೆ ನಾಯ್ಡುನಗರದ ನಾಗಲಿಂಗೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಮೈದಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಏರ್ಪಡಿಸಲಾಗಿದೆ. ಪರಿಷತ್ ವತಿಯಿಂದ ಎರಡನೇ ಬಾರಿ ಸಾಮೂಹಿಕ ಸತ್ಯನಾರಾಯಣ ಪೂಜೆ ಆಯೋಜಿಸಲಾಗಿದೆ. ಪೂಜಾ ಕಾರ್ಯಕ್ರಮದಲ್ಲಿ ಸುಮಾರು 1500 ದಂಪತಿಗಳು ಭಾಗವಹಿಸಿ ಏಕಕಾಲದಲ್ಲಿ ಸತ್ಯನಾರಾಯಣ ಪೂಜೆ ಮಾಡಲಿದ್ದಾರೆ ಎಂದು ಪರಿಷತ್ ನ ರಾಜ್ಯ ಕಾರ್ಯದರ್ಶಿ ಜಿ.ಬಸವರಾಜ್ ತಿಳಿಸಿದ್ದಾರೆ. (ವರದಿ-ಎಚ್.ಎನ್, ಎಂ.ಎನ್)

 

Leave a Reply

comments

Related Articles

error: