ಮೈಸೂರು

ಬಿಲ್ಡ್ ಟೆಕ್ -2016 ನ.26ರಂದು

ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಮೈಸೂರು ಘಟಕದಿಂದ  ಬಿಲ್ಡ್ ಟೆಕ್ 2016 ಅನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎನ್.ಸುಬ್ರಹ್ಮಣ್ಯ ತಿಳಿಸಿದರು.

ಅವರು, ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ “ಮಾಡ್ರನ್ ಹೌಸಿಂಗ್ ಡಿಸೈನ್ಸ್ ಅಂಡ್ ಟ್ರೆಂಡ್ಸ್” ವಿಷಯವಾಗಿ ರಾಷ್ಟ್ರೀಯಮಟ್ಟದ ವಿಚಾರ ಸಂಕಿರಣವನ್ನು ನ.26ರ ಶನಿವಾರ ಬೆಳಗ್ಗೆ 10 ಗಂಟೆಗೆ ರಡಿಸನ್‍ನಲ್ಲಿ ಆಯೋಜಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಬಿಲ್ಡರ್ಸ್ ಅಸೋಸಿಯೇಷನ್‍ ಆಫ್ ಇಂಡಿಯಾದ ಅಧ್ಯಕ್ಷ ಅವಿನಾಶ್ ಎಂ.ಪಾಟೀಲ್ ಹಾಗೂ ಮೈಸೂರು ಬಿಲ್ಡರ್ಸ್ ಚಾರಿಟೇಬಲ್ ಟ್ರಸ್ಟ್  ವ್ಯವಸ್ಥಾಪಕ ಮುಖ್ಯಸ್ಥ ಕೆ.ಶ್ರೀರಾಮ್ ಅವರು ಉಪನ್ಯಾಸವನ್ನು ನೀಡಲಿದ್ದಾರೆ. ಕಳೆದ ಹಲವಾರು ವರ್ಷಗಳಿಂದಲೂ ಸಂಸ್ಥೆಯು ಪ್ರತಿ ವರ್ಷವೂ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಬಿ.ಎಸ್.ದಿನೇಶ್, ಕೆ.ಎಸ್.ಬಾಲಾಜಿ, ಎಸ್.ಹೆಚ್.ಶ್ರೀನಿವಾಸ್ ಉಪಸ್ಥಿತರಿದ್ದರು.

Leave a Reply

comments

Related Articles

error: