ದೇಶಪ್ರಮುಖ ಸುದ್ದಿ

ಭದ್ರತಾ ಸಿಬ್ಬಂದಿಗಳಿಂದ ನಾಲ್ವರು ಶಂಕಿತ ಮಾವೋವಾದಿಗಳ ಹತ್ಯೆ

ಪಾಲಂ,ಫೆ.26-ಭದ್ರತಾ ಸಿಬ್ಬಂದಿಗಳು ನಡೆಸಿದ ಎನ್ ಕೌಂಟರ್ ನಲ್ಲಿ ನಾಲ್ವರು ಶಂಕಿತ ಮಾವೋವಾದಿಗಳು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನ ಪಾಲಂ ಜಿಲ್ಲೆಯಲ್ಲಿ ನಡೆದಿದೆ.

ಜಾರ್ಖಂಡ್ ಪೊಲೀಸ್ ಹಾಗೂ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ನಡೆಸಿದ ಜಂಟಿ ಕಾರ್ಯಾಚರಣೆಯ ಎನ್ ಕೌಂಟರ್ ನಲ್ಲಿ ಹತ್ಯೆಯಾದವರಲ್ಲಿ ಇಬ್ಬರು ಮಹಿಳೆಯರು ಇದ್ದರು. ಮಾವೋವಾದಿಗಳನ್ನು ಹತ್ಯೆಮಾಡಿರುವ ಭದ್ರತಾ ಸಿಬ್ಬಂದಿಗಳು ಭಾರೀ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಶೋಧ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ಮಾವೋವಾದಿಗಳನ್ನು ಹತ್ಯೆಗೈಯ್ಯಲಾಗುವುದು ಎಂದು ಪಾಲಂ ಪೊಲೀಸ್ ಅಧೀಕ್ಷಕ ಇಂದ್ರಜಿತ್ ಮಹಾಥಾ ಹೇಳಿದ್ದಾರೆ. (ವರದಿ-ಎಂ.ಎನ್)

Leave a Reply

comments

Related Articles

error: