ಮೈಸೂರು

ಯುವಕನ ಕಿರುಕುಳಕ್ಕೆ ಬೇಸತ್ತ ಅಪ್ರಾಪ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಮೈಸೂರು,ಫೆ.26:- ಪ್ರೀತಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತ ಅಪ್ರಾಪ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಮೈಸೂರಿನ ಉದಯಗಿರಿಯ ಮುನೇಶ್ವರ ನಗರದಲ್ಲಿ ನಡೆದಿದೆ.

ಮೃತಳನ್ನು ಅಪ್ರಾಪ್ತೆ ರಕ್ಷಿತಾ (15) ಎಂದು ಗುರುತಿಸಲಾಗಿದೆ. ಕಿರುಕುಳ ನೀಡುತ್ತಿದ್ದ ಮುನೇಶ್ವರ ನಗರದ ಯುವಕ ಗಿರೀಶ್ ನಾಪತ್ತೆಯಾಗಿದ್ದಾನೆ.

ಕಳೆದ ಹಲವು ದಿನಗಳಿಂದ ತನ್ನನ್ನ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಗಿರೀಶ್. ಮನೆ ಬಿಟ್ಟು ಓಡಿಹೋಗಿ ಮದುವೆಯಾಗೋಣ ಎಂದು ಒತ್ತಡ ಹೇರಿದ್ದ.  ಮದುವೆ ಆಗಲು ಒಪ್ಪದಿದ್ದಲ್ಲಿ ಮನೆಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಗಿರೀಶನ ಬೆದರಿಕೆಗೆ ಹೆದರಿ ಫೆ.21 ರಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.  ಬಳಿಕ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಸಾವನ್ನಪ್ಪಿದ್ದಾರೆ.

ಪೋಕ್ಸೋ ಕಾಯಿದೆ ಅಡಿ ನಾಪತ್ತೆಯಾದ ಗಿರೀಶನ ಬಂಧನಕ್ಕೆ ಉದಯಗಿರಿ ಪೊಲೀಸರು ಬಲೆ ಬೀಸಿದ್ದು, ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

 

 

Leave a Reply

comments

Related Articles

error: