ಕರ್ನಾಟಕ

ಕ್ರೀಡಾಪಟುಗಳಿಗೆ ನಗದು ಬಹುಮಾನಕ್ಕೆ ಅರ್ಜಿ ಆಹ್ವಾನ

ಮಂಡ್ಯ (ಫೆ.23): 2015, 2016, ಹಾಗೂ 2017 ನೇ ಸಾಲಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕ ಕ್ರೀಡಾಪಟುಗಳು ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ಕೇಂದ್ರ ಕಚೇರಿಯಿಂದ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ.

ಅರ್ಹ ಕ್ರೀಡಾಪಟುಗಳು ನಿಗಧಿತ ನಮೊನೆಯನ್ನು ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಕೋರಿರುವ ಮಾಹಿತಿಗಳನ್ನು ಲಗತ್ತಿಸಿ, ಮಾರ್ಚ್ 10ರೊಳಗೆ ಸಲ್ಲಿಸುವಂತೆ ಮಂಡ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

(ಎನ್‍.ಬಿ)

Leave a Reply

comments

Related Articles

error: