ದೇಶವಿದೇಶ

ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ : ಯುವಕನ ಬಂಧನ

ಶಿಮ್ಲಾ,ಫೆ.27: ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕನನ್ನು ಪೋಲಿಸರು ಬಂಧಿಸಿರುವ ಘಟನೆ ಹಿಮಾಚಲಪ್ರದೇಶದಲ್ಲಿ ಸೋಮವಾರ ನಡೆದಿದೆ.

ಪ್ರಕರಣ ಸಂಬಂಧ ಬಂಟಿ(25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಬಾಲಕಿಯ ಪೋಷಕರು ಹರಿಪುರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ ಬಳಿಕ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಪರೀಕ್ಷೆಗಾಗಿ ತಂಡಾ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376(ಅತ್ಯಾಚಾರ) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. (ವರದಿ: ಪಿ.ಎಸ್ )

Leave a Reply

comments

Related Articles

error: